ಶಬರಿಮಲೆ ಪಾವಿತ್ರ್ಯ ರಕ್ಷಣೆ: ಕೇರಳ ಬಿಜೆಪಿ ಭರವಸೆ!

Published : Mar 25, 2021, 07:41 AM ISTUpdated : Mar 25, 2021, 08:02 AM IST
ಶಬರಿಮಲೆ ಪಾವಿತ್ರ್ಯ ರಕ್ಷಣೆ: ಕೇರಳ ಬಿಜೆಪಿ ಭರವಸೆ!

ಸಾರಾಂಶ

ಶಬರಿಮಲೆ ಪಾವಿತ್ರ್ಯ ರಕ್ಷಣೆಗೆ ಕಾಯ್ದೆ: ಬಿಜೆಪಿ ಪ್ರಣಾಳಿಕೆ| ಲವ್‌ ಜಿಹಾದ್‌ ವಿರುದ್ಧ ಕಾಯ್ದೆ|  ಸಾಮಾಜಿಕ ಪಿಂಚಣಿ ತಿಂಗಳಿಗೆ 3500 ರು.ಗೆ ಏರಿಕೆ 

 

ತಿರುವನಂತಪುರಂ(ಮಾ.25): ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಸಿದ್ಧ ಶಬರಿಮಲೆ ದೇಗುಲದ ಪಾವಿತ್ರ್ಯ ರಕ್ಷಿಸಲು ಕಾಯ್ದೆ ರೂಪಿಸುವುದಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಜೊತೆಗೆ, ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ, ಲವ್‌ ಜಿಹಾದ್‌ ವಿರುದ್ಧ ಕಾಯ್ದೆ, ಸಾಮಾಜಿಕ ಪಿಂಚಣಿ ತಿಂಗಳಿಗೆ 3500 ರು.ಗೆ ಏರಿಕೆ ಮುಂತಾದ ಭರವಸೆಗಳನ್ನೂ ನೀಡಿದೆ.

ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಸ್ತ್ರೀಯರ ಪ್ರವೇಶಕ್ಕೆ ಅನುಮತಿ ನೀಡಿ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ ನಂತರ ನಡೆದ ಬೆಳವಣಿಗೆಗಳಿಂದಾಗಿ ಕೇರಳದಲ್ಲಿ ನೆಲೆ ಭದ್ರಪಡಿಸಿಕೊಳ್ಳುತ್ತಿರುವ ಬಿಜೆಪಿ ಈಗ ತನ್ನ ಚುನಾವಣಾ ಪ್ರಣಾಳಿಕೆಯಲ್ಲೂ ಆ ಅಂಶವನ್ನು ಸೇರಿಸಿದೆ. ಶಬರಿಮಲೆಗೆ ಸಂಬಂಧಿಸಿದಂತೆ ಅಲ್ಲಿನ ನಂಬಿಕೆ ಹಾಗೂ ಸಂಪ್ರದಾಯಗಳಿಗೇ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ದೇವಾಲಯದ ಆಡಳಿತವನ್ನು ರಾಜಕೀಯ ಹಿಡಿತದಿಂದ ಮುಕ್ತಗೊಳಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಬಿಜೆಪಿಯ ಕೇರಳ ಚುನಾವಣಾ ಪ್ರಣಾಳಿಕೆಯಲ್ಲಿರುವ ಇತರ ಪ್ರಮುಖ ಅಂಶಗಳು:

- ಎಲ್ಲರಿಗೂ ಮನೆ, ನೀರು ಮತ್ತು ವಿದ್ಯುತ್‌

- ಮನೆಯ ಯಜಮಾನ ರೋಗಪೀಡಿತನಾಗಿದ್ದರೆ ಮಾಸಿಕ 5000 ರು. ಪಿಂಚಣಿ

- ಎಲ್ಲಾ ಬಿಪಿಎಲ್‌ ಕುಟುಂಬಕ್ಕೆ 6 ಉಚಿತ ಎಲ್‌ಪಿಜಿ ಸಿಲಿಂಡರ್‌

- ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌

- ಭೂರಹಿತ ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ತಲಾ 5 ಎಕರೆ ಕೃಷಿ ಭೂಮಿ

- ಎಲ್ಲಾ ಉದ್ಯೋಗಗಳಿಗೆ ಕನಿಷ್ಠ ವೇತನ ನಿಗದಿ

- ಹಸಿವುಮುಕ್ತ, ಭಯೋತ್ಪಾದನೆಮುಕ್ತ, ರಾಜಕೀಯ ಹತ್ಯೆಮುಕ್ತ ಕೇರಳ ನಿರ್ಮಾಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!