ವಾಯುಭಾರ ಕುಸಿತ : ಈ ರಾಜ್ಯಗಳಲ್ಲಿ 3 ದಿನ ಭಾರಿ ಮಳೆ

Kannadaprabha News   | Asianet News
Published : Oct 22, 2020, 11:00 AM IST
ವಾಯುಭಾರ ಕುಸಿತ : ಈ ರಾಜ್ಯಗಳಲ್ಲಿ 3 ದಿನ ಭಾರಿ ಮಳೆ

ಸಾರಾಂಶ

ವಾಯುಭಾರ ಕುಸಿತದಿಂದ ಮುಂದಿನ ಮೂರು ದಿನಗಳ ಕಾಲ ಈ ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ವಿಶಾಖಪಟ್ಟಣ (ಅ.22): ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ವಾತಾವರಣ ಸೃಷ್ಟಿಯಾಗಿದ್ದು ಅಕ್ಟೋಬರ್‌ 23-24ರಂದು ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆ ಇದೆ. 

ಈ ಕಾರಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮೆ ಹಾಗೂ ತೆಲಂಗಾಣದಲ್ಲಿ ಮುಂದಿನ 3 ದಿನ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24ರವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚಿಸಿದೆ. 

ಇನ್ನೂ 3 ದಿನ ಭಾರಿ ಮಳೆ : ಎಲ್ಲೆಲ್ಲಿ ಅಬ್ಬರಿಸಲಿದ್ದಾನೆ ವರುಣ? ..

ತೆಲಂಗಾಣ, ಆಂಧ್ರದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಈ ರಾಜ್ಯಗಳಿಗೆ ಹೊಂದಿಕೊಂಡಿರುವ ಹಾಗೂ ಈಗಾಗಲೇ ನೆರೆಯಿಂದ ನಲುಗಿರುವ ಕರ್ನಾಟಕದ ಗಡಿ ಭಾಗಗಳ ಮೇಲೂ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. 

ಇದು ಈ ವರ್ಷದ 4ನೇ ವಾಯುಭಾರ ಕುಸಿತವಾಗಿದೆ. ಅ.5, 9 ಹಾಗೂ 16ರಂದು ವಾಯುಭಾರ ಕುಸಿತ ಸಂಭವಿಸಿ ಸಾಕಷ್ಟುಮಳೆ ಸುರಿದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: 14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!