
ನವೆದೆಹಲಿ(ಫೆ.11): ದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಹಾಗೂ ವ್ಯಕ್ತಿಯ ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಜಾರಿಗೆ ತರಲಾಗಿದೆ. ಇದೀಗ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಆರೋಗ್ಯ ಸೇತು ಆ್ಯಪ್ ಬಳಕೆದಾರರು ಸುಲಭವಾಗಿ ಆಯುಷ್ಮಾನ್ ಭಾರತ ಆರೋಗ್ಯ ಖಾತೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಆರೋಗ್ಯ ಸೇತು ಆ್ಯಪ್ ಬಳಕೆದಾರರು ಸುಲಭವಾಗಿ ಆಯುಷ್ಮಾನ್ ಭಾರತ್ ಆರೋಗ್ಯದ 14 ಸಂಖ್ಯೆಗಳ ಖಾತೆಯನ್ನು ರಚಿಸಬಹುದು ಎಂದಿದೆ. ಬಳಿಕ ಸದ್ಯ ಚಾಲ್ತಿಯಲ್ಲಿರುವ ವೈದ್ಯಕೀಯ ಸೌಲಭ್ಯ, ದಾಖಲೆಗಳನ್ನು ಹೊಸದಾಗಿ ರಚಿಸಿದ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯನ್ನು ಲಿಂಕ್ ಮಾಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
Arogya Karnataka Scheme : ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಬಿಟ್ಟು ಮತ್ತೇನು ಕೇಳುವಂತಿಲ್ಲ
14 ಅಂಕಿಗಳ ನೂತನ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯನ್ನು ಅಸ್ತಿತ್ವದಲ್ಲಿರುವ ವೈದ್ಯಕೀಯ ದಾಖಲೆ, ವೈದ್ಯರ ನೀಡಿರುವ ಔಷಧಿ ಚೀಟಿ, ಸೂಚನೆ, ಲ್ಯಾಬ್ ವರದಿ, ಆಸ್ಪತ್ರೆ ದಾಖಲೆ, ಆರೋಗ್ಯ ಸಮಸ್ಯೆ ಕುರಿತ ಎಲ್ಲಾ ಮಾಹಿತಿಗಳನ್ನು ಈ ಖಾತೆಯಲ್ಲಿ ಲಿಂಕ್ ಮಾಡಲು ಸಾಧ್ಯವಿದೆ.
ಕೊರೋನಾ ಸಂದರ್ಭದಲ್ಲಿ ಆರೋಗ್ಯ ಸೇತು ಆ್ಯಪ್ ಪ್ರಮುಖ ಪಾತ್ರ ನಿರ್ವಹಿಸಿದೆ. ಇಷ್ಟೇ ಅಲ್ಲ ಕೋವಿಡ್ ವೇಳೆ ಅತೀ ಹೆಚ್ಚಿನ ಜನರು ಆರೋಗ್ಯ ಸೇತು ಆ್ಯಪ್ ಬಳಕೆ ಆರಂಭಿಸಿದ್ದಾರೆ. ಇದೀಗ ಆರೋಗ್ಯ ಸೇತು ಆ್ಯಪ್ ಮೂಲಕ ಡಿಜಿಟಲ್ ಹೆಲ್ತ್ ಇಕೋಸಿಸ್ಟಮ್ ಮತ್ತಷ್ಟು ಗಟ್ಟಿಗೊಳಿಸಲಾಗುತ್ತಿದೆ. ಆರೋಗ್ಯ ಸೇತು ಆ್ಯಪ್ ಬಳಕೆದಾರರು ಸುಲಭವಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ತೆರೆದು ತಮ್ಮ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಲಿಂಕ್ ಮಾಡಿಕೊಳ್ಳಬುಹುದು ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಡಾ. ಆರ್‌ಎಸ್ ಶರ್ಮಾ ಹೇಳಿದ್ದಾರೆ.
ವರ್ಷಗಳ ಹಿಂದೆ ಕಂಡಿದ್ದ ಮೋದಿ ಕನಸು: ಇದು ಆರೋಗ್ಯ ರಹಸ್ಯದ ಕತೆ
21.4 ಕೋಟಿ ಮಂದಿ ಆರೋಗ್ಯ ಸೇತು ಆ್ಯಪ್ ಬಳಕೆ ಮಾಡುತ್ತಿದ್ದಾರೆ. ಇವರೆಲ್ಲರೂ ಇದೀಗ ಆಯುಷ್ಮಾನ್ ಭಾರತ ಆರೋಗ್ಯ ಸೇತು ಖಾತೆ ತೆರಲು ಸಾಧ್ಯವಿದೆ. ಈಗಾಗಲೇ 16.4 ಕೋಟಿ ಮಂದಿ ಆರೋಗ್ಯ ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ ಸೌಲಭ್ಯ ಪಡೆಯಲು ಕಾರ್ಯಪ್ರವೃತ್ತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ