
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು 'ಟವೆಲ್ ಡ್ಯಾನ್ಸ್' ಮಾಡಿರುವ ವಿಡಿಯೋವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ತಾನಾಗಿಯೇ ಪ್ರಕರಣವನ್ನು ಕೈಗೆತ್ತಿಕೊಂಡು, ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.
ಶಾಲಾ ಕಾರ್ಯಕ್ರಮವೊಂದರಲ್ಲಿ, ವಿದ್ಯಾರ್ಥಿನಿಯರು 'ದಿಲ್‌ವಾಲೇ ದುಲ್ಹನಿಯಾ ಲೇ ಜಾಯೇಂಗೆ' ಚಿತ್ರದ ಫೇಮಸ್ ಹಾಡು 'ಮೇರೆ ಖ್ವಾಬೋಂ ಮೇಂ'ಗೆ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡಿದ್ದರು. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಶಾಲಾ ಆಡಳಿತ ಮಂಡಳಿ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾದವು. ಶಿಕ್ಷಣ ಸಂಸ್ಥೆಗಳಲ್ಲಿ ಇರಬೇಕಾದ ಶಿಸ್ತು ಮತ್ತು ನೈತಿಕತೆಯ ಬಗ್ಗೆ ಈ ಘಟನೆ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು.
ಶಾಲೆಗಳಲ್ಲಿ ಇಂತಹ ನೃತ್ಯ ಪ್ರದರ್ಶನಗಳು ಮಕ್ಕಳ ಘನತೆಗೆ ಧಕ್ಕೆ ತರುತ್ತವೆ ಮತ್ತು ಅವರ ಮಾನಸಿಕ ಬೆಳವಣಿಗೆಗೆ ಮಾರಕ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಅಭಿಪ್ರಾಯಪಟ್ಟಿದೆ. ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಾಗ, ಅವು ಮಕ್ಕಳಿಗೆ ಸೂಕ್ತವಾಗಿವೆಯೇ ಎಂದು ಖಚಿತಪಡಿಸಿಕೊಳ್ಳುವಲ್ಲಿ ಶಾಲೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಯೋಗ ಕಿಡಿಕಾರಿದೆ.
ಇದನ್ನೂ ಓದಿ: ಮಧುರ ಚುಂಬನಂ ದಂತ ಭಗ್ನಂ: ಲಿಫ್ಟ್‌ನಲ್ಲಿ ಅಜ್ಜಿಗೆ ಅಜ್ಜ ಕಿಸ್ ಕೊಡುವಾಗ ನಡದೇ ಹೋಯ್ತು ಘನಘೋರ ದುರಂತ
ಈ ಘಟನೆ ಬಗ್ಗೆ ನಾಲ್ಕು ವಾರಗಳೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆವರಣದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ವರದಿಯಲ್ಲಿ ಸ್ಪಷ್ಟಪಡಿಸಬೇಕು ಎಂದು ಆಯೋಗ ತಿಳಿಸಿದೆ. ಜವಾಬ್ದಾರಿಯುತ ಶಿಕ್ಷಕರ ಸಮ್ಮುಖದಲ್ಲೇ ಇಂತಹ ಪ್ರದರ್ಶನ ನಡೆದಿರುವುದು ದೊಡ್ಡ ತಪ್ಪು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಲವು ಸಂಘಟನೆಗಳು ಆಗ್ರಹಿಸಿವೆ.
ಇದನ್ನೂ ಓದಿ: ಅಲ್ಲಿ ಹಂಗೆ, ಇಲ್ಲಿ ಹಿಂಗೆ; ರೀಲ್ಸ್ ಯುವತಿಯ ದ್ವೇಷ, ರೋಷ, ಕೋಪ ತಾಪ; ಪುರುಷರ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ