ಕೊರೋನಾ ಅಬ್ಬರ: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ!

By Kannadaprabha NewsFirst Published Mar 27, 2021, 7:27 AM IST
Highlights

ಕೊರೋನಾ ವೈರಸ್‌ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ| ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ| ರಾತ್ರಿ 8ರಿಂದ ಬೆಳಗ್ಗೆ 7ರ ವರೆಗೆ ಅಂಗಡಿ ಮಾಲ್‌ಗಳು ಬಂದ್‌

 

ಮುಂಬೈ(ಮಾ.27): ಕೊರೋನಾ ವೈರಸ್‌ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಾದ್ಯಂತ ಮಾ.28ರಿಂದ ರಾತ್ರಿ ಕಫä್ರ್ಯವನ್ನು ಜಾರಿ ಮಾಡಲಾಗಿದೆ. ಭಾನುವಾರದಿಂದ ರಾತ್ರಿ ಕಫä್ರ್ಯ ಜಾರಿ ಮಾಡಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆದೇಶ ಹೊರಡಿಸಿದ್ದಾರೆ. ರಾತ್ರಿ 8 ಗಂಟೆಯಿಂದ ಮುಂಜಾನೆ 7 ಗಂಟೆಯ ವರೆಗೆ ಶಾಪಿಂಗ್‌ ಮಾಲ್‌ಗಳು, ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಇದೇ ವೇಳೆ ರಾಜ್ಯದಲ್ಲಿ ಲಾಕ್‌ಡೌನ್‌ ಹೇರುವ ಉದ್ದೇಶ ಇಲ್ಲ. ಆದರೆ, ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗುತ್ತಿದೆ. ಒಂದು ವೇಳೆ ಜನರು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದರೆ ಇನ್ನಷ್ಟುಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದು ಉದ್ಧವ್‌ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಈ ಮುನ್ನ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ನಾಗ್ಪುರ ಸೇರಿದಂತೆ ಹಲವು ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗಿತ್ತು. ಸಭೆ, ಸಮಾರಂಭಗಳಿಗೆ ಕಡಿವಾಣ ಹೇರಲಾಗಿದೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಕೊರೋನಾ ಪ್ರಕರಣಗಳು ನಿಯಂತ್ರಣಕ್ಕೆ ಬಂದಿಲ್ಲ.

click me!