
ನವದೆಹಲಿ(ಜ.17): ನಿರ್ಭಯಾ ಹತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ಬೆನ್ನಲ್ಲೇ, ದೆಹಲಿ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ.
ಇದೇ ಫೆ.1ರ ಬೆಳಗ್ಗೆ 6 ಗಂಟೆಗೆ ನಾಲ್ವರೂ ಆರೋಪಿಗಳನ್ನು ಗಲ್ಲಿಗೇರಿಸುವಂತೆ ದೆಹಲಿ ಕೋರ್ಟ್ ನೂತನ ಡೆತ್ ವಾರೆಂಟ್ ಜಾರಿ ಮಾಡಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಬೆನ್ನಲ್ಲೇ, ದೆಹಲಿ ಕೋರ್ಟ್ ಫೆ.1ರಂದು ಗಲ್ಲುಶಿಕ್ಷೆ ಜಾರಿಗೊಳಿಸುವಂತೆ ಆದೇಶಿಸಿ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ.
ನಿರ್ಭಯಾ ಅಪರಾಧಿಗಳಿಗೆ ಗಲ್ಲು ಫಿಕ್ಸ್ : ಕ್ಷಮಾದಾನ ಅರ್ಜಿ ತಿರಸ್ಕೃತ
ಹೊಸ ಡೆತ್ ವಾರೆಂಟ್ ಅನ್ವಯ ಫೆ.1ರ ಬೆಳಗ್ಗೆ 6 ಗಂಟೆಗೆ ತಿಹಾರ್ ಜೈಲಿನಲ್ಲಿ ನಾಲ್ವರೂ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೆ ಏರಿಸಲಾಗುವುದು.
ನಿರ್ಭಯಾ ತಾಯಿ ಅಸಮಾಧಾನ:
ಇನ್ನು ಗಲ್ಲುಶಿಕ್ಷೆ ಜಾರಿಯ ಹೊಸ ದಿನಾಂಕದ ಕುರಿತು ಅಪಸ್ವರ ಎತ್ತಿರುವ ನಿರ್ಭಯಾ ತಾಯಿ, ಗಲ್ಲುಶಿಕ್ಷೆ ಜಾರಿ ವಿಳಂಬಬಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗಲ್ಲು ತಡೆಗೆ ನಿರ್ಭಯಾ ರೇಪಿಸ್ಟ್‌ಗಳ ಶತ ಪ್ರಯತ್ನ!
ಗಲ್ಲುಶಿಕ್ಷೆಯನ್ನು ಮುಂದೂಡುವ ಮೂಲಕ ಸರ್ಕಾರ ತಮಗೆ ಮೋಸ ಮಾಡುತ್ತಿದ್ದು, ನ್ಯಾಯಕ್ಕಾಗಿ ಕಾದು ಕಾದು ನಮಗೆ ಸುಸ್ತಾಗಿದೆ ಎಂದು ನಿರ್ಭಯಾ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ