ನಿರ್ಭಯಾ ದೋಷಿಗಳಿಗೆ ಗಲ್ಲು ಶಿಕ್ಷೆಗೆ ಕ್ಷಣಗಣನೆ| ರೇಪಿಸ್ಟ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದಿಲ್ಲಿ ಗೌರ್ನರ್
ನವದೆಹಲಿ[ಡಿ.05]: ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ 2012ರ ‘ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಉಪರಾಜ್ಯಪಾಲರು ತಿರಸ್ಕರಿಸಿದ್ದಾರೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಇದನ್ನು ಗೃಹ ಸಚಿವಾಲಯ ಪರಿಶೀಲಿಸಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ರವಾನಿಸಲಿದೆ. ಅಂತಿಮ ನಿರ್ಧಾರವನ್ನು ರಾಷ್ಟ್ರಪತಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
undefined
ನಿರ್ಭಯಾ ರೇಪಿಸ್ಟ್‌ಗಳು ನೇಣು ಕುಣಿಕೆಗೆ ಹತ್ತಿರ
2012ರ ಡಿ.16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ರಾಕ್ಷಸರ ರೀತಿಯಲ್ಲಿ ದುರುಳರು ಅತ್ಯಾಚಾರ ಎಸಗಿದ್ದರು. ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಆ ಪೈಕಿ ವಿನಯ್ ಶರ್ಮಾ ಎಂಬಾತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದ. ಹೀಗಾಗಿ ಎಲ್ಲಾ ನಾಲ್ವರು ದೋಷಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾದಂತೆ ಆಗಿದೆ.
ಈ ಪ್ರಕರಣ ದೇಶವಾಸಿಗಳನ್ನು ಸಿಡಿದೆಬ್ಬಿಸಿತ್ತು. ಹೋರಾಟ, ಪ್ರತಿಭಟನೆಗಳಿಗೆ ನಾಂದಿ ಹಾಡಿತ್ತು. ಇದಕ್ಕೆ ಮಣಿದಿದ್ದ ಅಂದಿನ ಯುಪಿಎ ಸರ್ಕಾರ ಅತ್ಯಾಚಾರದ ವಿರುದ್ಧ ಬಲಿಷ್ಠ ಕಾಯ್ದೆ ರೂಪಿಸಿ ಜಾರಿಗೊಳಿಸಿತ್ತು.
ಹೈದರಾಬಾದ್ ಪಶು ವೈದ್ಯೆ ಮೇಲೆ ಅತ್ಯಾಚಾಋ, ಕೊಲೆ
ದೆಹಲಿಯಲ್ಲಿ ನಿರ್ಭಯಾ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಇಂತಹುದೇ ಪ್ರಕರಣ ಹೈದರಾಬಾದ್‌ನಲ್ಲೂ ನಡೆದಿದ್ದು, ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಕೂಗು ಎದ್ದಿದ್ದು, ಆರೋಪಿಗಳ ಹೆತ್ತವರೂ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಹೈದರಾಬಾದ್ ಪಶು ವೈದ್ಯೆ ಮೇಲೆ ಅತ್ಯಾಚಾರ: ರೇಪ್ ಮಾಡಿ ಕೊಲೆಗೈದ ಆರೋಪಿಗಳು