ವೈದ್ಯಕೀಯ ಸಲಕರಣೆ ಆಮದು ಸುಂಕ ಕಡಿತ; ದೀದಿ ಮನವಿಗೂ ಮೊದಲೇ ಆಗಿದೆ ಎಂದ ವಿತ್ತ ಸಚಿವೆ!

Published : May 09, 2021, 05:34 PM ISTUpdated : May 09, 2021, 05:39 PM IST
ವೈದ್ಯಕೀಯ ಸಲಕರಣೆ ಆಮದು ಸುಂಕ ಕಡಿತ; ದೀದಿ ಮನವಿಗೂ ಮೊದಲೇ ಆಗಿದೆ ಎಂದ ವಿತ್ತ ಸಚಿವೆ!

ಸಾರಾಂಶ

3ನೇ ಬಾರಿಗೆ ಸಿಎಂ ಆದ ಬಳಿಕ 2ನೇ ಬಾರಿ ಪೇಚಿಗೆ ಸಿಲುಕಿದ ಮಮತಾ ಬ್ಯಾನರ್ಜಿ ವೈದ್ಯಕೀಯ ಸಲಕರಣೆ ಆಮದು ಸುಂಕ, ಜಿಎಸ್‌ಟಿ ಕಡಿತಕ್ಕೆ ದೀದಿ ಪತ್ರ ಎಲ್ಲಾ ಕ್ರಮಗಳನ್ನು ಕೇಂದ್ರ ಈಗಾಗಲೇ ತೆಗೆದುಕೊಂಡಿದೆ ಎಂದ ನಿರ್ಮಲಾ ಸೀತಾರಾಮನ್  

ನವದೆಹಲಿ(ಮೇ.09): ಪಶ್ಚಿಮ ಬಂಗಾಳ ಮುಖ್ಯಮಂತ್ರಿ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ಮಮತಾ ಬ್ಯಾನರ್ಜಿ ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಇದರ ನಡುವೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಪೇಚಿಗೆ ಸಿಲುಕಿದ್ದಾರೆ. ಸಿಎಂ ಬೆನ್ನಲ್ಲೇ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಕೊರೋನಾ ಕಾರಣ ವಿದೇಶದಿಂದ ಆಮದು ಮಾಡಿಕೊಳ್ಳುವ ವೈದ್ಯಕೀಯ ಸಲಕರಣೆ ಆಮದು ಸುಂಕ, GST(ತೆರಿಗೆ) ಕಡಿತಗೊಳಿಸುವಂತೆ ಪತ್ರ ಬರೆದಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಮನವಿಗೂ ಮೊದಲೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

ಮುಖ್ಯಮಂತ್ರಿಯಾದ ಬೆನ್ನಲ್ಲೇ ಪೇಚಿಗೆ ಸಿಲುಕಿದ ಮಮತಾ ಬ್ಯಾನರ್ಜಿ!.

ಕೊರೋನಾ ಸೋಂಕಿತರ ಚಿಕಿತ್ಸೆ ಸವಾಲಾಗಿರುವ ಕಾರಣ ಭಾರತ ವಿದೇಶಗಳಿಂದ ಆಕ್ಸಿಜನ್, ಲಸಿಕೆ ಸೇರಿದಂತೆ ವೈದ್ಯಕೀಯ ಸಲಕರಣೆಗಳನ್ನು ಆಮದು ಮಾಡಿಕೊಳ್ಳುತ್ತಿದೆ. 40ಕ್ಕೂ ಹೆಚ್ಚು ರಾಷ್ಟ್ರಗಳು ಭಾರತಕ್ಕೆ ನೆರವು ನೀಡುತ್ತಿದೆ. ಆಯಾ ರಾಜ್ಯಗಳು ವಿದೇಶಗಳಿಂದ ವೈದ್ಯಕೀಯ ಸಕರಣೆಗಳನ್ನು ಆಮದು ಮಾಡಿಕೊಳ್ಳುತ್ತಿದೆ. ವಿದೇಶದಿಂದ ಆಮದು ಮಾಡಿಕೊಳ್ಳುವ ತುರ್ತು ಹಾಗೂ ಅಗತ್ಯ ವೈದ್ಯಕೀಯ ಸಲಕರಣೆಗಳ ಮೇಲಿನ ಆಮದು ಸುಂಕ, ಜಿಎಸ್‌ಟಿ ಹಾಗೂ ಆರೋಗ್ಯ ಸೆಸೆ ಕಡಿತಗೊಳಿಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರಕ್ಕೆ ಪತ್ರ ಬರೆದಿದ್ದರು.

ಪಶ್ಚಿಮ ಬಂಗಾಳ ಹಿಂಸಾಚಾರ: ಕಾನೂನು ಸುವ್ಯವಸ್ಥೆ ಬಗ್ಗೆ ಪಿಎಂ ಮೋದಿ ಕಳವಳ!

ಮಮತಾ ಬ್ಯಾನರ್ಜಿ ಮನವಿಗೂ ಮೊದಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮೇ.03ರಂದು ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ವೈದ್ಯಕೀಯ ಸಲಕರಣೆಗಳ ಆಮದು ಸುಂಕ ಸೇರಿದಂತೆ ಇತರ ತೆರಿಗಳನ್ನು ಕಡಿತಗೊಳಿಸಿದೆ. ಮಮತಾ ಬ್ಯಾನರ್ಜಿ ಪತ್ರಕ್ಕೆ ಉತ್ತರವಾಗಿ ನಿರ್ಮಲಾ ಸೀತಾರಾಮನ್ ಸಂಪೂರ್ಣ ವಿವರಣೆ ನೀಡಿದ್ದಾರೆ.

 

ಒಟ್ಟು 15 ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮಾನ್, ಸ್ಪಷ್ಟ ಉತ್ತರ ನೀಡಿದ್ದಾರೆ.  ಕೊರೋನಾ ಸಂಕಷ್ಟದ ಸಮಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ದೇಶ ಸಜ್ಜಾಗಿದೆ. ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಬಂಗಾಳ ಸರ್ಕಾರ ಎಲ್ಲಾ ಮನವಿಗಳನ್ನು ಈಗಾಗಲೇ ಮಾಡಲಾಗಿದೆ. ಈ ಕುರಿತು ತೆರಿಗೆ ಕಡಿತಗೊಳಿಸಿರುವ ವೈದ್ಯಕೀಯ ಸಲಕರಣೆಗಳ ಕುರಿತು ಪಟ್ಟಿಯನ್ನೇ ಪೋಸ್ಟ್ ಮಾಡಿದ್ದಾರೆ. ಇಷ್ಟೇ ಅಲ್ಲ ಮಮತಾ ಬ್ಯಾನರ್ಜಿ ಕೇಳಿರುವ ಎಲ್ಲಾ ಬೇಡಿಕೆಗಳು ಈ ಪಟ್ಟಿಯಲ್ಲಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

 

ಇದರ ಜೊತೆಗೆ  ಆಮ್ಲಜನಕ, ಆಕ್ಸಿಜನ್ ಉತ್ಪಾದಕ ಘಟಕ,  ಸಂಗ್ರಹಣೆ ಮತ್ತು ಸಾಗಣೆಗೆ ಬಳಸುವ ಉಪಕರಣಗಳು, COVID ಸೋಂಕಿತರಿಗೆ ಆಕ್ಸಿಜನ್ ಕಾನ್ಸಟ್ರೇಟರ್ಸ್, ವೆಂಟಿಲೇಟರ್‌ಗಳು ಸೇರಿದಂತೆ ಚಿಕಿತ್ಸೆಗೆ  ಬಳಸುವ ಉಪಕರಣಗಳು ಮೇಲೂ ತೆರಗಿ ಕಡಿತಗೊಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

 

ಮಮತಾ ಬ್ಯಾನರ್ಜಿ ಈ ರೀತಿ ಕೇಂದ್ರ ಸರ್ಕಾರ ಆದೇಶದ ಬಂದ ಬಳಿಕ ಮನವಿ ಮಾಡುತ್ತಿರುವುದು ಇದೇ ಮೊದಲಲ್ಲ. 3ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದೀದಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಣ ಬಿಡುಗಡೆ ಮಾಡುವಂತೆ ಸುದೀರ್ಘ ಪತ್ರ ಬರೆದಿದ್ದರು. ಆದರೆ ಮಮತಾ ಬ್ಯಾನರ್ಜಿ ಮೇ 6 ರಂದು ಈ ಮನವಿ ಮಾಡಿದ್ದರು. ಆದರೆ ಮೇ.03ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಶ್ಚಿಮ ಬಂಗಾಳ ಕಿಸಾನ್ ಸಮ್ಮಾನ್ ಫಲಾನುಭವಿ ರೈತರ ಪಟ್ಟಿಯನ್ನು ಒದಗಿಸುವಂತೆ ಪತ್ರ ಬರೆದಿದ್ದರು. ಶೀಘ್ರದಲ್ಲೇ ಪಟ್ಟಿ ಒದಗಿಸಿ ಬಂಗಾಳ ಫಲಾನುಭವಿ ರೈತರಿಗೆ ಸಮ್ಮಾನ್ ನಿಧಿ ಕೈಸೇರುವಂತೆ ಮಾಡಿ ಎಂದು ಈ ಪತ್ರದಲ್ಲಿ ಮನವಿ ಮಾಡಿದ್ದರು. ಆದರೆ ಈ ಪತ್ರ ಬಂದ 3 ದಿನಗಳ ಬಳಿಕ ಮಮತಾ ಬ್ಯಾನರ್ಜಿ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿ ಎಂದು ಪತ್ರ ಬರೆದು ಪೇಚಿಗೆ ಸಿಲುಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ