
ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ನೀತಾ ಅಂಬಾನಿ ಅವರು ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕೇಶ್ ಅಂಬಾನಿ ಹುಟ್ಟುಹಬ್ಬಕ್ಕೆ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಹಾಗೂ ಅನಂತ್ ಅಂಬಾನಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಂಬಾನಿ ಕುಟುಂಬ ಬ್ಯುಸಿಯಾಗಿತ್ತು.
ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಇತ್ತೀಚೆಗೆ ಮಹಾರಾಷ್ಟ್ರದ ಅಹಲ್ಯಾನಗರ್ ಜಿಲ್ಲೆಯ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗುಲಾಬಿ ಬಣ್ಣದ ಸೀರೆಯುಟ್ಟಿದ್ದ ನೀತಾ ಅಂಬಾನಿ, ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಹಲವು ಫೋಟೋ ಹಾಗೂ ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿವೆ.
ಇತ್ತೀಚೆಗೆ ದೇವಸ್ಥಾನಗಳಿಗೆ ಅಂಬಾನಿ ಕುಟುಂಬದ ಭೇಟಿ
ಏಪ್ರಿಲ್‌ನಲ್ಲಿ ಪತಿ ಮುಕೇಶ್ ಅಂಬಾನಿ ಅವರ ಹುಟ್ಟುಹಬ್ಬದಂದು, ನೀತಾ ಅಂಬಾನಿ ಅವರು ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಇಡೀ ಕುಟುಂಬದ ಜೊತೆ ಭೇಟಿ ನೀಡಿದ್ದರು. ಈ ವೇಳೆ ಅವರ ಮಕ್ಕಳಾದ ಆಕಾಶ್ ಅಂಬಾನಿ, ಅನಂತ್ ಅಂಬಾನಿ, ಸೊಸೆಯಂದಿರಾದ ಶ್ಲೋಕಾ ಮೆಹ್ತಾ, ರಾಧಿಕಾ ಮರ್ಚೆಂಟ್ ಹಾಗೂ ಮೊಮ್ಮಕ್ಕಳು ಜೊತೆಗಿದ್ದರು.
ಕಳೆದ ತಿಂಗಳು, ಅಂಬಾನಿ ಕುಟುಂಬವು ಅನಂತ್ ಅಂಬಾನಿ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಮುಳುಗಿತ್ತು. ಜಾಮ್‌ನಗರದಲ್ಲಿ ನಡೆದ ಈ ಅದ್ಧೂರಿ ಸಮಾರಂಭಕ್ಕೆ ಬಾಲಿವುಡ್ ತಾರೆಯರ ದಂಡೇ ಹರಿದುಬಂದಿತ್ತು. ಶಾರುಖ್ ಖಾನ್, ಸಲ್ಮಾನ್ ಖಾನ್, ರಣವೀರ್ ಸಿಂಗ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅಂಬಾನಿ ಕುಟುಂಬದ ಅತಿಥಿಗಳಾಗಿ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇಶದಾದ್ಯಂತ ಅಭಿಮಾನಿಗಳು ಮತ್ತು ಹಿತೈಷಿಗಳು ಈ ಸಂದರ್ಭವನ್ನು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ