ವಾಹನಗಳಿಗೆ ಶೀಘ್ರ ತಬಲಾ, ಕೊಳಲು, ಪಿಟೀಲು ಹಾರ್ನ್: ಕರ್ಕಶ ಧ್ವನಿ ತಪ್ಪಿಸಲು ಗಡ್ಕರಿ ಪ್ಲಾನ್!

Published : Sep 04, 2021, 08:24 AM ISTUpdated : Apr 22, 2025, 10:28 AM IST
ವಾಹನಗಳಿಗೆ ಶೀಘ್ರ ತಬಲಾ, ಕೊಳಲು, ಪಿಟೀಲು ಹಾರ್ನ್: ಕರ್ಕಶ ಧ್ವನಿ ತಪ್ಪಿಸಲು ಗಡ್ಕರಿ ಪ್ಲಾನ್!

ಸಾರಾಂಶ

* ವಾಹನಗಳ ಹಾರ್ನ್‌ ಮಾಡಿದಾಗ ಅದರಿಂದ ಹೊರಹೊಮ್ಮುವ ಕರ್ಕಶ ಧ್ವನಿಗೆ ಬೇಸರ  * ವಾಹನಗಳಿಗೆ ಶೀಘ್ರ ತಬಲಾ, ಕೊಳಲು, ಪಿಟೀಲು ಹಾರ್ನ್ * ಕರ್ಕಶ ಧ್ವನಿ ತಪ್ಪಿಸಲು ಗಡ್ಕರಿ ಪ್ಲಾನ್!

ನವದೆಹಲಿ(ಸೆ.04): ವಾಹನಗಳ ಹಾರ್ನ್‌ ಮಾಡಿದಾಗ ಅದರಿಂದ ಹೊರಹೊಮ್ಮುವ ಕರ್ಕಶ ಧ್ವನಿಗೆ ಬೇಸರ ಪಡುವವರೇ ಹೆಚ್ಚು. ಆದರೆ ಮುಂದಿನ ದಿನಗಳಲ್ಲಿ ಇಂಥ ಕರ್ಣಕಠೋರ ಶಬ್ದಕ್ಕೆ ಬದಲಾಗಿ ಭಾರತೀಯ ಸಂಗೀತದ ವಾದ್ಯಗಳು ಕೇಳಿಬರುವ ಸಾಧ್ಯತೆ ಇದೆ! ಅಂದರೆ ತಬಲಾ, ಪಿಟೀಲು, ಕೊಳಲು ಸೇರಿದಂತೆ ನಾನಾ ವಾದ್ಯಗಳ ಮಧುರ ಧ್ವನಿ ಕೇಳಿಬರಲಿದೆ.

ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅವಕಾಶ

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ, ‘ನಾನು ನಾಗಪುರದಲ್ಲಿರುವ ಕಟ್ಟಡದಲ್ಲಿ 11ನೇ ಅಂತಸ್ತಿನಲ್ಲಿ ವಾಸಿಸುತ್ತಿದ್ದೇನೆ. ಆದರೂ ಮುಂಜಾನೆ ಪ್ರಾಣಾಯಾಮ ಮಾಡುವಾಗ ವಾಹನಗಳ ಹಾರ್ನ್‌ ಏಕಾಗ್ರತೆ ಹಾಳು ಮಾಡುತ್ತದೆ.

ಶಿರಾಡಿಯಲ್ಲಿ ಲಘು ವಾಹನಗಳಗೆ ಅವಕಾಶ

ಈ ವೇಳೆ ಇಂಥ ಕರ್ಕಶ ಧ್ವನಿಗಳನ್ನು ಸರಿಪಡಿಸುವ ಅಗತ್ಯ ಅರಿವಾಯ್ತು. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ವೇಳೆ ಸಂಗೀತ ವಾದ್ಯಗಳ ಧ್ವನಿ ಅಳವಡಿಕೆ ಬಗ್ಗೆ ಪ್ರಸ್ತಾಪ ಬಂತು. ಅದನ್ನು ಜಾರಿ ಮಾಡುವ ಹಾದಿಯಲ್ಲಿ ಇದೀಗ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ. ಈ ಸಂಬಂಧ ನಾವು ಹೊಸ ಕಾಯ್ದೆ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಈಗಾಗಲೇ ವಾಹನಗಳಿಂದಲೂ ಹರೊಡುವ ಹಾರ್ನ್‌ನಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದ್ದು, ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮನಸ್ಸಿಗೆ ಹಿತವಾದಂಥ ಸೌಂಡ್ ಹಾರ್ನ್‌ಗೆ ಅಳವಡಿಸಿದೆ ಶಬ್ದ ಮಾಲಿನ್ಯವನ್ನು ಕಿಡಮೆ ಮಾಡಬಹುದು ಎಂಬುವುದು ನಿತಿನ್ ಗಡ್ಕರಿಯವರ ಆಶಯ. ಶಬ್ದ ಮಾಲಿನ್ಯ ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಷ್ಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂತಾಗಿದೆ. ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನುತ್ತಾರೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್‌ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ.

ತಯಾರಿಸುವ ವಾಹನಗಳಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿದರೆ ಆಗುವ ಅನೇಕ ಅನಾಹುತವನ್ನು ಅವೈಡ್ ಮಾಡಬಹುದು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು