
ಪಟನಾ(ಜು.05): ಬಿಹಾರ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿ ಅವ್‌ದೇಶ್ ನಾರಾಯಣ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಬೆನ್ನಲ್ಲೇ, ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಿತ್ ಶಾ ಸಂಧಾನ: ಮಣಿಪುರ ಸರ್ಕಾರ ಪತನದಿಂದ ಬಚಾವ್!
ನಿತೀಶ್ ಅವರ ಗಂಟಲು ದ್ರವ ಮಾದರಿಯನ್ನು ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಕಳುಹಿಸಿಕೊಡಲಾಗಿದ್ದು, ಭಾನುವಾರ ಫಲಿತಾಂಶ ಬರುವ ನಿರೀಕ್ಷೆ ಇದೆ. ನಿತೀಶ್ ಕುಮಾರ್ ಮಾತ್ರವಲ್ಲದೆ ಮುಖ್ಯಮಂತ್ರಿ ಕಾರ್ಯಾಲಯದ 15 ಸಿಬ್ಬಂದಿಗಳೂ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸದಾಗಿ ಆಯ್ಕೆಯಾದ ಶಾಸಕರ ಪ್ರಮಾಣವಚನ ಕಾರ‍್ಯಕ್ರಮದಲ್ಲಿ ಅವ್‌ದೇಶ್ ನಾರಾಯಣ್ ಮತ್ತು ನಿತೀಶ್ ಕುಮಾರ್ ಒಂದೇ ವೇದಿಕೆ ಹಂಚಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ