
ಪಾಟ್ನಾ(ನ.15): ದೇಶದ ಗಮನಸೆಳೆದಿದ್ದ ಬಿಹಾರ ಚುನಾವಣೆ ಫಲಿತಾಂಶದಲ್ಲಿ NDA ಕೂಟ ಸ್ಪಷ್ಟ ಬಹುಮತ ಪಡೆದ ಬಳಿಕ ಮುಖ್ಯಮಂತ್ರಿ ಯಾರು ಅನ್ನೋ ಚರ್ಚೆ ಶುರುವಾಗಿತ್ತು. ಬಿಜೆಪಿಗಿಂತ ಕಡಿಮೆ ಸ್ಥಾನ ಗೆದ್ದ ಕಾರಣ ಜೆಡಿಯು ನಾಯಕ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಿಲ್ಲ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಎಲ್ಲಾ ಗೊಂದಲಕ್ಕೆ ತೆರೆಬಿದ್ದಿದೆ. NDA ಸಭೆಯಲ್ಲಿ ಬಿಹಾರದ ಮುಂದಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಂದು ಖಚಿತಪಡಿಸಿದೆ.
"
40 ಸ್ಥಾನ ಗೆದ್ದ ನಿತೀಶ್ ಮುಖ್ಯಮಂತ್ರಿ ಹೇಗೆ ಸಾಧ್ಯ? ಹೊಸ ದಾಳ ಉರುಳಿಸಿದ RJD!
NDA ಮಹತ್ವದ ಸಭೆಯಲ್ಲಿ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ ಪಟ್ಟ ಕಟ್ಟಲು ನಿರ್ಧರಿದೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿ 74 ಸ್ಥಾನ ಗೆದ್ದಿದ್ದರೆ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು 43 ಸ್ಥಾನ ಗೆದ್ದಿದೆ. ಆದರೆ ಕೊಟ್ಟ ಮಾತಿನಂತೆ ನಿತೀಶ್ ಕುಮಾರ್ ಮುಂದಿನ ಸಿಎಂ ಎಂದು ಎನ್‌ಡಿಎ ಸ್ಪಷ್ಟಪಡಿಸಿದೆ.
ಸತತ ನಾಲ್ಕನೇ ಬಾರಿಗೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ನಾಳೆ(ನ.16) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಜವಾಬ್ದಾರಿ ವಹಿಸಲಿದ್ದಾರೆ. ನಾಳೆ ಸಂಜೆ 4.30ರ ವೇಳೆಗೆ ರಾಜಭವನದಲ್ಲಿ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸಭೆಯಿಂದ ಹೊರಬಂದ ಬಳಿಕ ಮಾಧ್ಯಮ ಜೊತೆ ಮಾತನಾಡಿದ ನಿತೀಶ್ ನಾಳೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವುದಾಗಿ ಹೇಳಿದ್ದಾರೆ. ನಿತೀಶ್ ಕುಮಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಬಳಿಕ ಸರ್ಕಾರ ರಚಿಸಲು ಅನುಮತಿ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ