ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ ಚಿಕಿತ್ಸೆ ಸಿಗಲ್ಲ!

Published : Jun 09, 2022, 07:41 AM IST
ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ ಚಿಕಿತ್ಸೆ ಸಿಗಲ್ಲ!

ಸಾರಾಂಶ

* ವೈದ್ಯರಿಗೆ ಚಿಕಿತ್ಸೆ ನಿರಾಕರಣೆ ಹಕ್ಕು ನೀಡಲು ಎನ್‌ಎಂಸಿ ಪ್ರಸ್ತಾಪ * ವೈದ್ಯರ ಮೇಲಿನ ಹಲ್ಲೆ ತಡೆಯಲು ಮಹತ್ವದ ಕ್ರಮ * ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ ಚಿಕಿತ್ಸೆ ಸಿಗಲ್ಲ!

ನವದೆಹಲಿ(ಜೂ.09): ವೈದ್ಯರ ಮೇಲೆ ಹಲ್ಲೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಮಹತ್ವದ ಕರಡು ವರದಿಯೊಂದನ್ನು ಸಿದ್ಧಪಡಿಸಿದೆ. ಇದರ ಪ್ರಕಾರ ರೋಗಿಗಳು ಅಥವಾ ಅವರ ಸಂಬಂಧಿಗಳು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ನಿಂದಿಸಿದರೆ ಅಥವಾ ಅವರ ವಿರುದ್ಧ ಹಿಂಸಾತ್ಮಕ ಕೃತ್ಯ ಎಸಗಿದರೆ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಬಹುದಾಗಿದೆ.

ನೋಂದಾಯಿತ ವೈದ್ಯರ ವೃತ್ತಿಪರ ನಡವಳಿಕೆ ನಿಯಮಾವಳಿ 2022ರ ಕರಡಿನಂತೆ ‘ರೋಗಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ವಿರುದ್ಧ ರೋಗಿ ಅಥವಾ ಆತನ ಸಂಬಂಧಿಕರು ಕೆಟ್ಟದಾಗಿ ವರ್ತಿಸಿದರೆ, ಹಲ್ಲೆ ಎಸಗಿದರೆ ಅಥವಾ ನಿಂದಿಸಿದರೆ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಬಹುದು. ಅಲ್ಲದೇ ರೋಗಿಯು ನಿಗದಿತ ಶುಲ್ಕವನ್ನು ಪಾವತಿಸದೇ ಇದ್ದಲ್ಲಿ ಅವರಿಗೆ ನೀಡುತ್ತಿರುವ ಚಿಕಿತ್ಸೆಯನ್ನು ಸ್ಥಗಿತಗೊಳಿಸುವ ಅಧಿಕಾರ ವೈದ್ಯರಿಗಿದೆ. ಆದರೆ ಸರ್ಕಾರಿ ವೈದ್ಯರಿಗೆ ಹಾಗೂ ತುರ್ತು ಚಿಕಿತ್ಸೆ ರೋಗಿಗಳ ವಿಚಾರದಲ್ಲಿ ಈ ನಿಯಮ ಅನ್ವಯಿಸುವುದಿಲ್ಲ’ ಎಂದು ತಿಳಿಸಿದೆ.

‘ವೈದ್ಯರು ವೃತ್ತಿಪರ ನಡವಳಿಕೆಗೆ ಚ್ಯುತಿ ಬರುವಂತೇ ತಮ್ಮ ಕರ್ತವ್ಯದ ಅವಧಿಯಲ್ಲಿ ಅಥವಾ ಅದರ ನಂತರ ಮದ್ಯ ಸೇರಿದಂತೆ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿದರೆ ಅದನ್ನು ದುರ್ನಡತೆ ಎಂದು ಪರಿಗಣಿಸಲಾಗುವುದು’ ಎಂದು ಕರಡು ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..