ವಿಚ್ಛೇದಿತ ಪುತ್ರಿಗೆ ಅನುಕಂಪದ ಕೆಲಸ ಕೊಡುವಂತಿಲ್ಲ!

Published : Sep 14, 2021, 03:08 PM ISTUpdated : Sep 15, 2021, 08:23 AM IST
ವಿಚ್ಛೇದಿತ ಪುತ್ರಿಗೆ ಅನುಕಂಪದ ಕೆಲಸ ಕೊಡುವಂತಿಲ್ಲ!

ಸಾರಾಂಶ

* ಮಂಡ್ಯ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪು * ಹೈಕೋರ್ಟ್ ನಿರ್ದೇಶನವನ್ನು ತಳ್ಳಿಹಾಕಿದ ಘನ ನ್ಯಾಯಾಲಯ

ಮಂಡ್ಯ(ಸೆ.14): ಸರ್ಕಾರಿ ನೌಕರರು ಮೃತಪಟ್ಟ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಕೊಡುವಂತಿಲ್ಲ ಎಂದು ಮಂಡ್ಯ ಪ್ರಕರಣವೊಂದರ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಈ ಸಂಬಂಧ ಉದ್ಯೋಗ ನೀಡುವಂತೆ ರಾಜ್ಯ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ತಳ್ಳಿಹಾಕಿರುವ ಸುಪ್ರೀಂಕೋರ್ಟ್, ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ 2021ರಲ್ಲಿ ತಿದ್ದುಪಡಿ ತರಲಾಗಿದ್ದು, ಅದರ ವ್ಯಾಪ್ತಿಗೆ ವಿಚ್ಛೇದಿತ ಪುತ್ರಿಯೂ ಸೇರುವುದರಿಂದ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವುದಕ್ಕೆ ಅರ್ಹರಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಮಡದಿ ಇಚ್ಛೆಗೆ ವಿರುದ್ಧ ನಡೆಸೋ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಹೈಕೋರ್ಟ್‌

ಪ್ರಕರಣವೇನು?

ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಪಿ.ಭಾಗ್ಯಮ್ಮ ಅವರು ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ 2012ರ ಮಾ.25ರಂದು ಪಿ.ಭಾಗ್ಯಮ್ಮ ಮೃತಪಟ್ಟಿದ್ದರು. ಪುತ್ರಿ ವಿ.ಸೌಮ್ಯಶ್ರೀ ವಿವಾಹವಾಗಿದ್ದು,೨೦೧೨ರ ಸೆಪ್ಟೆಂಬರ್ 12ರಂದು ಸೌಮ್ಯಶ್ರೀ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದರು. 2013ರ ಮಾರ್ಚ್ 20ರಂದು ಮಂಡ್ಯ ನ್ಯಾಯಾಲಯವು ಇವರ ವಿಚ್ಛೇದನವನ್ನು ಊರ್ಜಿತಗೊಳಿಸಿತ್ತು. 

ಸೌಮ್ಯಶ್ರೀ ಅವರ ತಾಯಿ ಜಿಲ್ಲಾ ಖಜಾನೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದ ಹಿನ್ನೆಲೆಯಲ್ಲಿ ಅವರ ಸಾವಿನ ಬಳಿಕ 2013ರ ಮಾರ್ಚ್ 21ರಂದು ಅನುಕಂಪದ ಉದ್ಯೋಗ ಪಡೆಯುವುದಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಕಾನೂನು ಪ್ರಕಾರ ಉದ್ಯೋಗ ನೀಡಲು ನಿರಾಕರಿಸಲಾಯಿತು. ಇದನ್ನು ಪ್ರಶ್ನಿಸಿ ವಿ.ಸೌಮ್ಯಶ್ರೀ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿ ಹೈಕೋರ್ಟ್ ಅನುಕಂಪದ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರದ ಖಜಾನೆ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು.

ಉಚ್ಛ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ರಾಜ್ಯ ಖಜಾನೆ ನಿರ್ದೇಶಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಸೌಮ್ಯಶ್ರೀ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯುವುದಕ್ಕೆ ಅರ್ಹರಲ್ಲ ಎಂದು ತಿಳಿಸಿ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿತು.

ತಲಾಖ್ ಕೊಟ್ಟು ಪತ್ನಿಯ ಖಾಸಗಿ ವಿಡಿಯೋವನ್ನೇ ಹರಿಬಿಟ್ಟ ಪಾಪಿ ಪತಿ!

ಕರ್ನಾಟಕ ನಾಗರಿಕ ಸೇವಾ (ಸಹಾನುಭೂತಿ ಆಧಾರದ ನೇಮಕಾತಿ) ನಿಯಮಗಳು-1996ರ ಪ್ರಕಾರ ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ. ಉದ್ಯೋಗಿಯನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗಷ್ಟೇ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬಹುದು ಎಂದು ಪೀಠ ಹೇಳಿದೆ. 

ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ ೨೦೨೧ರಲ್ಲಿ ತಿದ್ದುಪಡಿ ತಂದು ವಿಚ್ಛೇದಿತ ಪುತ್ರಿಯನ್ನೂ ಇದರೊಳಗೆ ಸೇರ್ಪಡೆಗೊಳಿಸಲಾಗಿದೆ. ಉದ್ಯೋಗಿ ಮರಣಹೊಂದಿದ ನಂತರ ವಿಚ್ಛೇದನ ಪಡೆದ ಸಂದರ್ಭದಲ್ಲಿ ಉದ್ಯೋಗಕ್ಕೆ ಪುತ್ರಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್