ಭ್ರಷ್ಟರು ಸರ್ಕಾರ, ವ್ಯವಸ್ಥೆಯ ಭಾಗವಾಗಿದ್ದರೂ ಯಾರನ್ನೂ ಬಿಡಬೇಡಿ: ಸಿಬಿಐಗೆ ಪ್ರಧಾನಿ ಮೋದಿ ಸಲಹೆ

Published : Apr 03, 2023, 03:00 PM ISTUpdated : Apr 03, 2023, 03:11 PM IST
ಭ್ರಷ್ಟರು ಸರ್ಕಾರ, ವ್ಯವಸ್ಥೆಯ ಭಾಗವಾಗಿದ್ದರೂ ಯಾರನ್ನೂ ಬಿಡಬೇಡಿ: ಸಿಬಿಐಗೆ ಪ್ರಧಾನಿ ಮೋದಿ ಸಲಹೆ

ಸಾರಾಂಶ

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಲ್ಲ ಮತ್ತು ಸಿಬಿಐನ ಕಾರ್ಯವ್ಯಾಪ್ತಿಯು ದೇಶದಲ್ಲಿ ಹಲವಾರು ಪಟ್ಟು ಹೆಚ್ಚಾಗಿದೆ ಎಂದೂ ಪ್ರಧಾನಿ ಮೋದಿ ಹೇಳಿದರು.

ಹೊಸದೆಹಲಿ (ಏಪ್ರಿಲ್‌ 3, 2023): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ಘಾಟನೆ ಮಾಡಿದ್ರು.  ಈ ವೇಳೆ ಅವರು ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಸಂಕೀರ್ಣಗಳನ್ನು ಉದ್ಘಾಟಿಸಿದರು. ಸಿಬಿಐ ಅನ್ನು ಶ್ಲಾಘಿಸಿದ ಮೋದಿ, ಯಾವ ಭ್ರಷ್ಟರನ್ನೂ ಬಿಡಬಾರದು ಎಂದೂ ಮೋದಿ ಹೇಳಿದ್ದಾರೆ.

ಇಂದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ (PM Narendra Modi), ಸಿಬಿಐ (CBI) ತನ್ನ ಕೆಲಸ ಮತ್ತು ತಂತ್ರಗಳ ಮೂಲಕ ಜನರಿಗೆ ನಂಬಿಕೆಯನ್ನು ನೀಡಿದೆ. ಇಂದಿಗೂ ಯಾವುದಾದರೂ ಒಂದು ಪ್ರಕರಣ ಇತ್ಯರ್ಥವಾಗದೇ ಉಳಿದಿದ್ದರೆ ಅದನ್ನು ಸಿಬಿಐಗೆ ವಹಿಸಬೇಕು ಎಂಬ ಬೇಡಿಕೆಗಳು ಕೇಳಿ ಬರುತ್ತವೆ. ವೃತ್ತಿಪರ (Professional) ಮತ್ತು ದಕ್ಷ ಸಂಸ್ಥೆಗಳಿಲ್ಲದೆ (Efficient Institutions) ಅಭಿವೃದ್ಧಿ ಹೊಂದಿದ ಭಾರತವನ್ನು (India) ನಿರ್ಮಿಸುವುದು ಸಾಧ್ಯವಿಲ್ಲ, ಆದ್ದರಿಂದ ಸಿಬಿಐಗೆ ದೊಡ್ಡ ಜವಾಬ್ದಾರಿ ಇದೆ ಎಂದೂ ಹೇಳಿದ್ದಾರೆ. 

ಇದನ್ನು ಓದಿ: ರಾಜ್ಯದಲ್ಲಿ ಪ್ರಧಾನಿ ಮೋದಿ 20 ರ‍್ಯಾಲಿ: ನಮೋ ಜನಪ್ರಿಯತೆ ಲಾಭ ಪಡೆಯಲು ಬಿಜೆಪಿ ಪ್ಲಾನ್‌

ಅಲ್ಲದೆ, ಭ್ರಷ್ಟಾಚಾರದ (Corruption) ವಿರುದ್ಧ ಹೋರಾಡಲು ಕೇಂದ್ರ ಸರ್ಕಾರಕ್ಕೆ (Central Government) ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಲ್ಲ ಮತ್ತು ಸಿಬಿಐನ ಕಾರ್ಯವ್ಯಾಪ್ತಿಯು ದೇಶದಲ್ಲಿ ಹಲವಾರು ಪಟ್ಟು ಹೆಚ್ಚಾಗಿದೆ ಎಂದೂ ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಹೇಳಿದರು. ಈ ತನಿಖಾ ಸಂಸ್ಥೆ ಸೈಬರ್ ಕ್ರೈಂ ಪ್ರಕರಣಗಳನ್ನು ಸಹ ತನಿಖೆ ನಡೆಸುತ್ತಿದೆ ಎಂದೂ ಪ್ರಧಾನಿ ಪ್ರತಿಪಾದಿಸಿದರು.

ಈ ಮಧ್ಯೆ, ಸಿಬಿಐಗೆ ಸಲಹೆ ನೀಡಿದ ಪ್ರಧಾನಿ ಮೋದಿ, “ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಶಕ್ತಿಶಾಲಿಗಳು ಎಂದು ನನಗೆ ತಿಳಿದಿದೆ, ಅವರು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಇಂದಿಗೂ ಅವರು ಕೆಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದಾರೆ. ಆದರೆ ನೀವು (ಸಿಬಿಐ) ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಬೇಕು, ಯಾವುದೇ ಭ್ರಷ್ಟರನ್ನು ಬಿಡಬಾರದು’’ ಎಂದು ಪ್ರಧಾನಿ ಮೋದಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತೆ ಜಗತ್ತಿನಲ್ಲೇ ನಂ. 1 ಜನಪ್ರಿಯ ನಾಯಕ

ಇನ್ನೊಂದೆಡೆ, ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಸಿಬಿಐನ ಅತ್ಯುತ್ತಮ ತನಿಖಾ ಅಧಿಕಾರಿಗಳಿಗೆ ಚಿನ್ನದ ಪದಕ ಪಡೆದವರಿಗೆ ಇಂದು, ಏಪ್ರಿಲ್ 3 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಏಪ್ರಿಲ್ 1, 1963 ರಂದು ಗೃಹ ಸಚಿವಾಲಯದ ನಿರ್ಣಯದಿಂದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಅನ್ನು ಸ್ಥಾಪಿಸಲಾಯಿತು ಮತ್ತು ಪ್ರಸಿದ್ಧ ತನಿಖಾ ಸಂಸ್ಥೆ ಶನಿವಾರ ತನ್ನ 60 ವರ್ಷಗಳನ್ನು ಪೂರೈಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಂಟರ್‌ಪೋಲ್ ಜನರಲ್ ಅಸೆಂಬ್ಲಿಯಲ್ಲಿ ಬ್ಲೂ ಟಿಕ್‌ನೊಂದಿಗೆ ಸಿಬಿಐ ಟ್ವಿಟ್ಟರ್‌ಗೆ ಪಾದಾರ್ಪಣೆ ಮಾಡಿದೆ. ಈ ಕಾರ್ಯಕ್ರಮದ ಬಗ್ಗೆ ಸುದ್ದಿ ಹಂಚಿಕೊಳ್ಳುವುದು ಸಿಬಿಐ ಟ್ವಟ್ಟರ್‌ ಹ್ಯಾಂಡಲ್‌ನ ಉದ್ದೇಶವಾಗಿತ್ತು. 

ಇದನ್ನೂ ಓದಿ: ಭ್ರಷ್ಟರೆಲ್ಲ ಇಂದು ಒಂದೇ ವೇದಿಕೆಗೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಪ್ರಹಾರ; ಕರ್ನಾಟಕದಲ್ಲಿ ಬಿಜೆಪಿ ನಂ. 1 ಎಂದ ಮೋದಿ

ಇನ್ನೊಂದೆಡೆ, ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಆರೋಪದ ನಡುವೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಸಮಯದಲ್ಲಿ ವಜ್ರ ಮಹೋತ್ಸವದ ಆಚರಣೆಗಳು ನಡೆಯುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದುರುಪಯೋಗಪಡಿಸಿಕೊಂಡಿರುವ ವಿಚಾರವಾಗಿ ಒಟ್ಟು 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?