
ಕೋಲ್ಕತ್ತಾ(ಏ. 14): ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳದ ಅಸನ್‌ಸೋಲ್‌ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಂಗಳವಾರ ಮಾತನಾಡಿದ ಓವೈಸಿ, ಮಮತಾ ಬ್ಯಾನರ್ಜಿ ಹಾಗೂ ನರೇಂದ್ರ ಮೋದಿ ಅರ್ನ, ತಂಗಿಯಂತೆ. ಇಬ್ಬರೂ ತಮ್ಮ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಇನ್ನು ಪಶ್ಚಿಮ ಬಂಗಾಳದಲ್ಲಿರುವ ಟಿಎಂಸಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಕಳೆದ ಹತ್ತು ವರ್ಷದಲ್ಲಿ ಮುಸಲ್ಮಾನರ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳೇನೆಂದು ಟಿಎಂಸಿ ಪಟ್ಟಿ ಮಾಡಲು. ಸರ್ಕಾರಕ್ಕೆ ಇದು ನನ್ನ ಚಾಲೆಂಜ್ ಎಂದಿದ್ದಾರೆ.
ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ನಾಲ್ಕು ಹಂತದ ಮತದಾನ ನಡೆದಿದೆ. ಏಪ್ರಿಲ್ 22ರಂದು ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ