ಹೊಸ ನೀತಿಯ ಅನುಸಾರ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ: ಎಫ್‌ಸಿಐ ಸ್ಪಷ್ಟನೆ

Published : Jun 16, 2023, 02:40 AM IST
ಹೊಸ ನೀತಿಯ ಅನುಸಾರ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ: ಎಫ್‌ಸಿಐ ಸ್ಪಷ್ಟನೆ

ಸಾರಾಂಶ

ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ ಕೇಳಿಬಂದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಎಫ್‌ಸಿಐ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಎಫ್‌ಸಿಐ ನೀತಿಯಲ್ಲಿ ಬದಲಾವಣೆಯಾಗಿರುವ ಕಾರಣ ರಾಜ್ಯಗಳಿಗೆ ಹೆಚ್ಚುವರಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ನವದೆಹಲಿ (ಜೂ.16): ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ ಕೇಳಿಬಂದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಎಫ್‌ಸಿಐ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಎಫ್‌ಸಿಐ ನೀತಿಯಲ್ಲಿ ಬದಲಾವಣೆಯಾಗಿರುವ ಕಾರಣ ರಾಜ್ಯಗಳಿಗೆ ಹೆಚ್ಚುವರಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

‘ಹೆಚ್ಚುವರಿ ಅಕ್ಕಿಗಾಗಿ ಕರ್ನಾಟಕ ಸರ್ಕಾರದಿಂದ ನಮಗೆ ಮನವಿ ಬಂದಿತ್ತು. ಅಲ್ಲದೇ ಇದನ್ನು ನೀಡಲು ನಮ್ಮ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಒಪ್ಪಿಗೆಯನ್ನೂ ಸೂಚಿಸಿದ್ದರು. ಆದರೆ ನಮ್ಮ ನೀತಿ ಬದಲಾವಣೆಯಾಗಿರುವ ಮಾಹಿತಿ ಅವರಿಗೆ ಲಭ್ಯವಿಲ್ಲದ ಕಾರಣ ಒಪ್ಪಿಗೆ ನೀಡಿದ್ದರು. ಆದರೆ ಇದೀಗ ನಮ್ಮ ನೀತಿ ಬದಲಾಗಿದೆ. ರಾಜ್ಯಗಳಿಗೆ ನೇರವಾಗಿ ಅಕ್ಕಿ ಮಾರಾಟ ನಿಲ್ಲಿಸಲಾಗಿದೆ. ಅಕ್ಕಿ-ಗೋಧಿ ಬೆಲೆ ನಿಯಂತ್ರಿಸಲು ಮುಕ್ತ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ. ಹಾಗಾಗಿ ರಾಜ್ಯಗಳಿಗೆ ನೀಡುತ್ತಿದ್ದ ಹೆಚ್ಚುವರಿ ಧಾನ್ಯದ ಸರಬರಾಜು ತಡೆ ಹಿಡಿಯಲಾಗಿದೆ’ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಅಶೋಕ್‌ ಕೆ.ಕೆ.ಮೀನಾ ಅವರು ಹೇಳಿದ್ದಾರೆ.

ಮಣಿಪುರ ಗಲಾಟೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ

‘ಈ ಹಿಂದೆ ರಾಜ್ಯಗಳಿಗೆ ಹೆಚ್ಚಿನ ಧಾನ್ಯ ಪೂರೈಕೆ ಮಾಡಲಾಗುತ್ತಿತ್ತು. ಈ ನಡುವೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಗೋಧಿ ಬೆಲೆ ಏರಿಕೆಯಾಗುತ್ತಿರುವುದರಿಂದ ಅದನ್ನು ಸಹ ನಾವು ನಿಯಂತ್ರಣ ಮಾಡಬೇಕಿದೆ. ಪ್ರಧಾನ್‌ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ 80 ಕೋಟಿ ಜನರಿಗೆ ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಉಳಿದ 60 ಕೋಟಿ ಜನರ ಬಗ್ಗೆಯೂ ನಾವು ಚಿಂತಿಸಬೇಕಿದೆ. ಹಾಗಾಗಿ ಈ ನಿಮಯದಲ್ಲಿ ಬದಲಾವಣೆಯನ್ನು ತರಲಾಗಿದೆ. ನೀತಿ ಬದಲಾವಣೆಯಾದ ಬೆನ್ನಲ್ಲೇ ನಮ್ಮ ಅಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ನೀಡಲಾಗಿದ್ದ ಅನುಮತಿ ಪತ್ರವನ್ನು ಹಿಂಪಡೆಯಲಾಗಿದೆ’ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ