ಹಿಂದಿ ಹೇರಲ್ಲ, ಕರ್ನಾಟಕದ ಜತೆ ಕನ್ನಡದಲ್ಲೇ ನನ್ನಿಂದ ಪತ್ರ ವ್ಯವಹಾರ : ಅಮಿತ್‌ ಶಾ ಮಹತ್ವದ ಘೋಷಣೆ!

ಕೇಂದ್ರ ಸಚಿವ ಅಮಿತ್ ಶಾ ಅವರು ಡಿಸೆಂಬರ್‌ನಿಂದ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳೊಂದಿಗೆ ಅಧಿಕೃತ ಸಂವಹನವನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಘೋಷಿಸಿದ್ದಾರೆ. ಸ್ಥಳೀಯ ಭಾಷೆಗಳನ್ನು ಉತ್ತೇಜಿಸಲು ರಾಜಭಾಷಾ ವಿಭಾಗದಲ್ಲಿ ಹೊಸ ಇಲಾಖೆಯನ್ನು ತೆರೆಯಲಾಗಿದೆ.

No Hindi imposition I will correspond with Karnataka in Kannada UHM Amit Shah's significant announcement rav

ನವದೆಹಲಿ (ಮಾ.22): ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಸಮರ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸಚಿವ ಅಮಿತ್‌ ಶಾ ಅವರು, ಡಿಸೆಂಬರ್‌ನಿಂದ ಕರ್ನಾಟಕ ಸೇರಿದಂತೆ ಆಯಾ ರಾಜ್ಯಗಳ ಜತೆ ಅಧಿಕೃತ ಸಂವಹನವನ್ನು ಸ್ಥಳೀಯ ಭಾಷೆಯಲ್ಲಿಯೇ ನಡೆಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಶುಕ್ರವಾರ ರಾಜ್ಯಸಭೆಯಲ್ಲಿ ಸ್ಥಳೀಯ ಭಾಷೆ ವಿಚಾರವಾಗಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿದು ಮಾತನಾಡಿದ ಶಾ, ‘ಡಿಸೆಂಬರ್‌ನಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಮತ್ತು ಜನಸಾಮಾನ್ಯರ ಜೊತೆಗಿನ ಅಧಿಕೃತ ಪತ್ರ ವ್ಯವಹಾರಗಳನ್ನು ಸ್ಥಳೀಯ ಭಾಷೆಯಲ್ಲೇ ಮಾಡಲಾಗುವುದು’ ಎಂದು ಘೋಷಿಸಿದರು.

Latest Videos

ಇದನ್ನೂ ಓದಿ: ಏಯ್ ಡಿಕೆ ಶಿವಕುಮಾರ, ಹಿಂದಿ ಹೇರಿಕೆಗೆ ರಾಹುಲ್, ಸೋನಿಯಾಗಾಂಧಿ ಪರಿಹಾರ ಕೊಡ್ತಾರಾ?; ಕೋಡಿಹಳ್ಳಿ ಏಕವಚನದಲ್ಲೇ ವಾಗ್ದಾಳಿ!

ಜೊತೆಗೆ ಸ್ಥಳೀಯ ಭಾಷೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜಭಾಷಾ ವಿಭಾಗದಲ್ಲಿ ಹೊಸ ಇಲಾಖೆಯನ್ನು ತೆರೆಯಲಾಗಿದೆ. ಅದರ ಅಡಿಯಲ್ಲಿ ಅನುವಾದಕ್ಕೆ ಅನುಕೂಲವಾಗಲು ಆ್ಯಪ್‌ಗಳನ್ನು ಬಿಡುಗಡೆ ಮಾಡಲಾಗುವುದು. ಭಾರತದ ಪ್ರತಿ ಭಾಷೆಯೂ ವಿಶೇಷವಾಗಿದ್ದು, ಅವುಗಳು ದೇಶದ ಸಂಸ್ಕೃತಿಯನ್ನು ಸಾರುತ್ತವೆ ಎಂದು ಅಮಿತ್‌ ಶಾ ಹೇಳಿದರು.

vuukle one pixel image
click me!