
ನವದೆಹಲಿ:(ಅ. 27) ಬೆಂಗಳೂರಿನಲ್ಲಿ (Bengaluru) ವಾಸಮಾಡುತ್ತಿರುವ 72 ರೋಹಿಂಗ್ಯಾ (Rohingya)ನಿರಾಶ್ರಿತರನ್ನು ತಕ್ಷಣಕ್ಕೆ ಗಡಿಪಾರು (deport) ಮಾಡುವ ಯಾವುದೇ ಉದ್ದೇಶ ಇಲ್ಲ ಎಂದು ಕರ್ನಾಟಕ ಸರ್ಕಾರ (Karnataka Govt) ಸುಪ್ರೀಂಕೋರ್ಟ್‌ಗೆ (Supreme Court) ಮಾಹಿತಿ ನೀಡಿದೆ.
72 ರೋಹಿಂಗ್ಯಾಗಳ ಗಡಿಪಾರು ಕೋರಿ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಮಾಹಿತಿ ನೀಡಿರುವ ಕರ್ನಾಟಕ ಸರ್ಕಾರ, ತಕ್ಷಣಕ್ಕೆ ಈ ಅರ್ಜಿಯನ್ನು ಪಾಲಿಸುವುದು ಕಷ್ಟ. ರೊಹಿಂಗ್ಯಾ ನಿರಾಶ್ರಿತರು ಬೆಂಗಳೂರಿನಲ್ಲಿ ವಿವಿಧ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇವರ ವಿರುದ್ಧ ಪೊಲೀಸರು ಯಾವುದೇ ಒತ್ತಾಯದ ಕ್ರಮಗಳನ್ನು ಕೈಗೊಂಡಿಲ್ಲ. ಅವರನ್ನು ಯಾವುದೇ ನಿರಾಶ್ರಿತ ಕೇಂದ್ರಗಳಲ್ಲಿ ಬಂಧಿಸಲಾಗಿಲ್ಲ ಹಾಗೂ ಅವರನ್ನು ಗಡಿಪಾರು ಮಾಡುವ ಕುರಿತು ಯಾವುದೇ ಯೋಜನೆಗಳನ್ನು ತಕ್ಷಣಕ್ಕೆ ರೂಪಿಸಿಲ್ಲ ಎಂದು ಅಫಿಡವಿಟ್‌ನಲ್ಲಿ ಹೇಳಿದೆ.
ರೊಹಿಂಗ್ಯಾ ನಿರಾಶ್ರಿತರ ಮಾಹಿತಿ ಕಲೆ ಹಾಕಲು ರಾಜ್ಯಗಳಿಗೆ ಕೇಂದ್ರದ ಕಟ್ಟಪ್ಪಣೆ
ಮಯನ್ಮಾರ್ ಮತ್ತು ಬಾಂಗ್ಲಾದೇಶದಿಂದ ವಲಸೆ ಬಂದಿರುವ ನಿರಾಶ್ರಿತರು ಭಾರತದ ಬಹಳ ಕಡೆ ನೆಲೆಸಿದ್ದಾರೆ. ಇದು ದೇಶದ ಸಾರ್ವಭೌಮತೆಗೆ ಧಕ್ಕೆ ತರುತ್ತದೆ. ಹಾಗಾಗಿ ಅವರನ್ನು ಗುರುತಿಸಿ ಗಡಿಪಾರು ಮಾಡಬೇಕು ಎಂದು ಅಶ್ವಿನಿ ಕುಮಾರ್ ಸುಪ್ರಿಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶದ ಗಡಿ ಭಾಗದಲ್ಲಿ ರೋಹಿಂಗ್ಯಾ ನಿರಾಶ್ರಿತರು ಒಳಕ್ಕೆ ಬರುತ್ತಿರುವುದು ಚರ್ಚೆಯ ವಿಷಯವಾಗಿತ್ತು. ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರಿಗೆ ಪಾನ್, ಆಧಾರ್, ಪಾಸ್‌ಪೋರ್ಟ್, ಪಡಿತರ ಚೀಟಿ, ಮತದಾರರ ಚೀಟಿ, ಚಾಲನಾ ಪರವಾನಗಿ ಒದಗಿಸುವ ಸರ್ಕಾರಿ ನೌಕರರು, ಟ್ರಾವೆಲ್ ಏಜೆಂಟ್‌ಗಳು ಮುಂತಾದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಕ್ರಮ ಜಾರಿ ಮಾಡಬೇಕು ಎಂದು ಕೇಳಿಕೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ