ದಿಲ್ಲಿ ಗಣರಾಜ್ಯೋತ್ಸವ ಪರೇಡಲ್ಲಿ ಈ ಬಾರಿ ರಾಜ್ಯದ ಸ್ತಬ್ಧಚಿತ್ರ ಇಲ್ಲ

Kannadaprabha News   | Kannada Prabha
Published : Jan 17, 2026, 07:06 AM IST
Republic Day 2026

ಸಾರಾಂಶ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ. ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಒಪ್ಪದ ಕೇಂದ್ರ

ಬೆಂಗಳೂರು : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ.

ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ

ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಯೋಜಿಸಲಾಗಿತ್ತು. ಆದರೆ, ಈ ಸ್ತಬ್ಧಚಿತ್ರ ಪ್ರದರ್ಶಿಸುವ ಪ್ರಸ್ತಾಪ ಅಂಗೀಕೃತವಾಗದ ಹಿನ್ನೆಲೆಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಈ ಬಾರಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಪ್ರಗತಿ ಮೈದಾನದಲ್ಲಿ ಸ್ತಬ್ಧಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಗಳು ತಿಳಿಸಿವೆ.

ಆತ್ಮನಿರ್ಭರ ಭಾರತದ ಹಾದಿ ಸ್ವಾವಲಂಬಿ ರಾಜ್ಯಗಳೊಂದಿಗೆ ಪ್ರಾರಂಭ

ಆತ್ಮನಿರ್ಭರ ಭಾರತದ ಹಾದಿ ಸ್ವಾವಲಂಬಿ ರಾಜ್ಯಗಳೊಂದಿಗೆ ಪ್ರಾರಂಭವಾಗುತ್ತದೆ. ಕರ್ನಾಟಕವು ಕೃಷಿ ಕೈಗಾರಿಕೆ, ನಾವೀನ್ಯತೆ ಮತ್ತು ಸಂಸ್ಕೃತಿಯಲ್ಲಿ ಸಮತೋಲಿತ ಪ್ರಗತಿ ಮೂಲಕ ರಾಷ್ಟ್ರವನ್ನು ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ಕೊಂಡೊಯ್ಯುತ್ತಿದೆ. ಆತ್ಮನಿರ್ಭರ ಭಾರತದ ದೃಷ್ಟಿಗೆ ಕರ್ನಾಟಕ ಸಮಗ್ರ ಕೊಡುಗೆ ನೀಡುತ್ತಿದೆ ಎಂಬುದು ಈ ಸ್ತಬ್ಧಚಿತ್ರದ ಸಂಕೇತವಾಗಿತ್ತು.

ಕಳೆದ ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೊತ್ಸವ ಪರೇಡ್‌ನಲ್ಲಿ ಐತಿಹಾಸಿಕ ನಗರವಾದ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರ ಗಮನ ಸೆಳೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ರಸ್‌ಮಲೈ ಅಣ್ಣಾಮಲೈ ಪ್ರಚಾರ ಮಾಡಿದ ಕಡೆ ಬಿಜೆಪಿಗರಿಗೆ ಗೆಲುವು; ರಾಜ್‌ಠಾಕ್ರೆಗೆ ಭಾರೀ ಮುಖಭಂಗ
ದಿಲ್ಲಿ ಸ್ಫೋಟ ನಂಟಿನ ಅಲ್‌ ಫಲಾ ವಿವಿಯ ₹140 ಕೋಟಿ ಆಸ್ತಿ ಜಪ್ತಿ