ರೇಪಿಸ್ಟ್‌ಗಳಿಗೆ ಕ್ಷಮಾದಾನ ಇಲ್ಲ: ರಾಷ್ಟ್ರಪತಿ ಕೋವಿಂದ್

By Suvarna NewsFirst Published Dec 6, 2019, 2:38 PM IST
Highlights

ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ| ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ| ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳ ಮಹತ್ವದ ನಿರ್ಧಾರ

ಹೈದರಾಬಾದ್[ಡಿ.06]: ಹೈದರಾಬಾದ್‌ ಎನ್‌ಕೌಂಟರ್ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಈ ನಿರ್ಧಾರ ಅತ್ಯಾಚಾರಿಗಳಲ್ಲಿ ಮತ್ತಷ್ಟು ನಡುಕ ಹುಟ್ಟಿಸಿದೆ.

ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ.  ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.

ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ 'ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು' ಎಂದಿದ್ದಾರೆ.

ನಿರ್ಭಯಾ ದೋಷಿಗಳಿಗೆ ಗಲ್ಲು ಶಿಕ್ಷೆಗೆ ಕ್ಷಣಗಣನೆ!

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್!

ಈಗಾಗಲೇ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳಿಗೆ ಸುಪ್ರೀಂಖ ಕೋರ್ಟ್ ಗಲ್ಲುಶಿಕ್ಷೆ ವಿಧಿಸಿದೆ. ಇದಕ್ಕೆ ದಿನಗಳೂ ಸಮೀಪಿಸುತ್ತಿದೆ. ಈ ನಡುವೆ ರಾಜ್ಯಪಾಲರಿಗೆ ದೋಷಿಗಳು ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಅದು ತಿರಸ್ಕೃತಗೊಂಡಿತ್ತು. ಹೀಗಿರುವಾಗ ಪ್ರಕರಣದ ದೋಷಿಗಳು ಕ್ಷಮಾದಾನ ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವಾಲಯಕ್ಕೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಶುಕ್ರವಾರ ಗೃಹ ಸಚಿವಾಲಯವೂ ಈ ಅರ್ಜಿಯನ್ನು ತಿರಸ್ಕರಿಸಿದೆ. ಆದರೀಗ ರಾಷ್ಟ್ರಪತಿಗಳಿಗೆ ಮೇಲ್ಮನವಿ ಸಲ್ಲಿಸುವ ಮೊದಲೇ ಇಂತಹ ನಿರ್ಧಾರ ಪ್ರಕಟಗೊಂಡಿದ್ದು, ನಿರ್ಭಯಾ ಅತ್ಯಾಚಾರಿಗಳು ಗಲ್ಲಿಗೇರುವುದು ಖಚಿತವಾಗಿದೆ.

ನಿರ್ಭಯಾ ರೇಪಿಸ್ಟ್‌ಗಳು ನೇಣು ಕುಣಿಕೆಗೆ ಹತ್ತಿರ

ಡಿಸೆಂಬರ್ 6ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!