ಸದನದಲ್ಲಿ ಗೌರ್ನರ್ ಭಾಷಣ ಮಾಡೋದೇ ಬೇಡ : ಸ್ಟಾಲಿನ್‌

Kannadaprabha News   | Kannada Prabha
Published : Jan 23, 2026, 05:08 AM IST
Tamil Nadu CM MK stalin

ಸಾರಾಂಶ

‘ರಾಜ್ಯಪಾಲರ ಭಾಷಣದೊಂದಿಗೆ ವರ್ಷದ ಮೊದಲ ವಿಧಾನಮಂಡಲ ಅಧಿವೇಶನವನ್ನು ಪ್ರಾರಂಭಿಸುವ ಅಭ್ಯಾಸವನ್ನು ಅಂತ್ಯಗೊಳಿಸಬೇಕು. ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸಂಸತ್ತಿನಲ್ಲಿ ಸಾಂವಿಧಾನಿಕ ತಿದ್ದುಪಡಿ ತರಲು ಯತ್ನಿಸಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ : ‘ರಾಜ್ಯಪಾಲರ ಭಾಷಣದೊಂದಿಗೆ ವರ್ಷದ ಮೊದಲ ವಿಧಾನಮಂಡಲ ಅಧಿವೇಶನವನ್ನು ಪ್ರಾರಂಭಿಸುವ ಅಭ್ಯಾಸವನ್ನು ಅಂತ್ಯಗೊಳಿಸಬೇಕು. ಈ ನಿಟ್ಟಿನಲ್ಲಿ ದೇಶಾದ್ಯಂತ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸಂಸತ್ತಿನಲ್ಲಿ ಸಾಂವಿಧಾನಿಕ ತಿದ್ದುಪಡಿ ತರಲು ಯತ್ನಿಸಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಗೆಹಲೋತ್‌ ಅವರು ಭಾಷಣ ಮಾಡಲು ನಿರಾಕರಿಸಿದ್ದಕ್ಕೆ ಪ್ರತಿಕ್ರಿಯೆ

ಕರ್ನಾಟಕ ವಿಧಾನಮಂಡಲ ಅಧಿವೇಶನದ ಆರಂಭದ ದಿನ ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌ ಅವರು ಭಾಷಣ ಮಾಡಲು ನಿರಾಕರಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸ್ಟಾಲಿನ್, ‘ಇದಕ್ಕೆ ಈಗಿರುವ ಏಕೈಕ ಪರಿಹಾರವೆಂದರೆ ವರ್ಷದ ಮೊದಲ ವಿಧಾನಮಂಡಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುವ ಪರಿಪಾಠಕ್ಕೆ ಮಂಗಳ ಹಾಡುವುದು’ ಎಂದು ಹೇಳಿದರು.

ಮೊದಲು ತಮಿಳುನಾಡು. ನಂತರ ಕೇರಳ. ಈಗ ಕರ್ನಾಟಕ

‘ಮೊದಲು ತಮಿಳುನಾಡು. ನಂತರ ಕೇರಳ. ಈಗ ಕರ್ನಾಟಕ. ರಾಜ್ಯಪಾಲರು ಈ 3 ರಾಜ್ಯಗಳಲ್ಲೂ ಒಂದೇ ನಡೆ ಅನುಸರಿಸುತ್ತಿದ್ದಾರೆ. ಇದರ ಹಿಂದಿನ ಉದ್ದೇಶ ಸ್ಪಷ್ಟ. ರಾಜ್ಯ ಸರ್ಕಾರಗಳು ಸಿದ್ಧಪಡಿಸಿದ ಭಾಷಣವನ್ನು ಓದಲು ನಿರಾಕರಿಸುವ ರಾಜ್ಯಪಾಲರು ಮತ್ತು ಪಕ್ಷದ ಏಜೆಂಟರಂತೆ ವರ್ತಿಸುತ್ತಾರೆ. ಚುನಾಯಿತ ರಾಜ್ಯ ಸರ್ಕಾರಗಳನ್ನು ದುರ್ಬಲಗೊಳಿಸುವುದು ಅವರ ಉದ್ದೇಶ’ ಎಂದರು.

- ಮೊದಲು ತಮಿಳುನಾಡು, ನಂತರ ಕೇರಳ, ಈಗ ಕರ್ನಾಟಕದಲ್ಲಿ ರಾಜ್ಯಪಾಲರ ವಿವಾದ

- ಗೌರ್‍ನರ್‌ಗಳು ಮೂರೂ ರಾಜ್ಯಗಳಲ್ಲೂ ಒಂದೇ ಮಾದರಿಯ ನಡೆ ಅನುಸರಿಸುತ್ತಿದ್ದಾರೆ

- ಇದರ ಹಿಂದಿನ ಉದ್ದೇಶ ಸ್ಪಷ್ಟ- ಚುನಾಯಿತ ಸರ್ಕಾರಗಳನ್ನು ದುರ್ಬಲಗೊಳಿಸುವುದು

- ರಾಜ್ಯಪಾಲರ ಭಾಷಣದೊಂದಿಗೆ ಅಧಿವೇಶನ ಆರಂಭಕ್ಕೆ ಅಂತ್ಯ ಹಾಡುವುದು ಪರಿಹಾರ

- ಸಮಾನ ಮನಸ್ಕ ಪಕ್ಷಗಳ ಜತೆ ಈ ಬಗ್ಗೆ ಚರ್ಚಿಸುತ್ತೇನೆ: ತಮಿಳುನಾಡು ಸಿಎಂ ಸ್ಟಾಲಿನ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉತ್ತರ ಕನ್ನಡ ಜಿಲ್ಲೆಯ ಉಗ್ರಗೆ ಬಂಗಾಳದಲ್ಲಿ 10 ವರ್ಷ ಜೈಲು
ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯ ಅಪಹರಿಸಿ ಅತ್ಯಾ*ಚಾರ