
ನವದೆಹಲಿ[ಮಾ.04]: ದೇಶದಲ್ಲಿ ಹೊಸದಾಗಿ ಕೊರೋನಾ ಸೋಂಕಿನ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ವಿವಿಧ ಸಚಿವಾಲಯಗಳ ಮುಖ್ಯಸ್ಥರ ಜೊತೆ ನಡೆಸಿದ ಸಭೆಯಲ್ಲಿ ಕೊರೋನಾ ಸೋಂಕು ಹರಡದಂತೆ ತಡೆಯಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಮತ್ತು ಪರಿಸ್ಥಿತಿ ಎದುರಿಸಲು ಮಾಡಿಕೊಂಡಿರುವ ಸನ್ನದ್ಧ ಸ್ಥಿತಿಯ ಬಗ್ಗೆ ಪ್ರಧಾನಿ ಪರಾಮರ್ಶೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಬೆಂಗ್ಳೂರಲ್ಲಿ ಕೊರೋನಾ ವೈರಸ್: ರೋಗ ಬರದಂತೆ ಹಿಂಗ್ ಮಾಡಿದ್ರೆ ಬೆಸ್ಟ್
ಈ ನಡುವೆ ಸಭೆಯ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊರೋನಾ ಸೋಂಕಿನ ಬಗ್ಗೆ ದೇಶವಾಸಿಗಳು ಭಯಭೀತರಾಗಬೇಕಿಲ್ಲ ಎಂದು ಹೇಳಿದ್ದಾರೆ. ‘ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಸ್ವಯಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಣ್ಣ ಮತ್ತು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬೇಕು. ವೈರಸ್ ತಡೆಗಟ್ಟುವ ಬಗ್ಗೆ ಸಭೆ ನಡೆಸಿ ಪರಾಮರ್ಶೆ ನಡೆಸಿದ್ದೇನೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ