ಭಾರತೀಯರಿಗೊಂದು ಸಂತೋಷದ ಸುದ್ದಿ: 80 ಜಿಲ್ಲೆಯಲ್ಲಿ 14 ದಿನಗಳಿಂದ ಕೊರೋನಾ ಕೇಸ್ ಇಲ್ಲ

Published : Apr 24, 2020, 09:03 PM IST
ಭಾರತೀಯರಿಗೊಂದು ಸಂತೋಷದ ಸುದ್ದಿ: 80 ಜಿಲ್ಲೆಯಲ್ಲಿ 14 ದಿನಗಳಿಂದ ಕೊರೋನಾ ಕೇಸ್ ಇಲ್ಲ

ಸಾರಾಂಶ

ಕೊರೋನಾ ವೈರಸ್‌ ವಿರುದ್ಧದ ಸಮರ ಸಾರಿರುವ ದೇಶಗಳಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಇದೆ.  ಇದನ್ನು ಇಡೀ ಜಗತ್ತೆ ಕೊಂಡಾಡಿದೆ. ಇದೀಗ ಭಾರತೀಯರಿಗೊಂದು ಸಂತೋಷದ ಸುದ್ದಿ ಅಂದ್ರೆ 80 ಜಿಲ್ಲೆಯಲ್ಲಿ14 ದಿನಗಳಿಂದ ಕೊರೋನಾ ಕೇಸ್ ಇಲ್ಲ

ನವದೆಹಲಿ, (ಏ.24): ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಕೊವಿಡ್-19 ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್,  ಕಳೆದ 14 ದಿನಗಳಿಂದ ದೇಶದ 80 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಸರಿಯಾದ ಸಮಯಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಮತ್ತು ಇದು ಕೊರೋನಾ ವೈರಸ್ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದರು.

ಕೊರೋನಾ ಹೋರಾಟದಲ್ಲಿ ವಿಶ್ವನಾಯಕನಾಗಿ ಹೊರಹೊಮ್ಮಿದ ಮೋದಿ

ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ 23 ಸಾವಿರಕ್ಕೂ ಹೆಚ್ಚಿದ್ದು, ಒಟ್ಟು ಈವರೆಗೆ 718 ಜನರು ಮೃತಪಟ್ಟಿದ್ದಾರೆ. ಇನ್ನು 4748ಕ್ಕೂ ಜನರು ಈವರೆಗೆ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಲಾಕ್ ಡೌನ್ ಜಾರಿಯಾದ ಕಾರಣ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 1,684 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 23, 077 ಕ್ಕೆ ಏರಿಕೆಯಾಗಿದೆ. ಒಂದು ವೇಳೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸದಿದ್ದರೆ ಇದುವರೆಗೆ 73 ಸಾವಿರ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದವು ಎಂದು ಹೇಳಿದರು,

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನಂತರ ದೆಹಲಿ, ಮಧ್ಯಪ್ರದೇಶ, ರಾಜಸ್ತಾನದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮಧುಮೇಹ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: AIIMS ವೈದ್ಯರಿಂದ ಅದ್ಭುತ ಸಾಧನೆ, ಈಗ ಕೇವಲ 2 ಗಂಟೆಯಲ್ಲಿ ಗುಣಪಡಿಸಬಹುದು!