
ನವದೆಹಲಿ: ‘ವಾಯುಮಾಲಿನ್ಯ ಪ್ರಚೋದಿಸುವ ಯಾವುದೇ ಚಟುವಟಿಕೆಯನ್ನು ಯಾವುದೇ ಧರ್ಮ ಪ್ರೋತ್ಸಾಹಿಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ ಹಾಗೂ ನ. 25ರೊಳಗೆ ರಾಷ್ಟ್ರ ರಾಜಧಾನಿಯಲ್ಲಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದಿಲ್ಲಿ ಸರ್ಕಾರಕ್ಕೆ ಸೂಚಿಸಿದೆ.
ರಾಜಧಾನಿಯಲ್ಲಿ ಪಟಾಕಿ ನಿಷೇಧ ಜಾರಿಗೆ ಸಂಬಂಧಿಸಿದ ವಿಚಾರಣೆ ನಡೆಸಿದ ನ್ಯಾ। ಅಭಯ್ ಓಕಾ ಹಾಗೂ ನ್ಯಾ। ಆಗಸ್ಟೀನ್ ಜಾರ್ಜ್ ಮಸೀಹ್, ಅವರನ್ನೊಳಗೊಂಡ ಪೀಠ ‘ಮಾಲಿನ್ಯ ಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕು ಸಂವಿಧಾನದ 21ನೇ ವಿಧಿ ಅಡಿಯಲ್ಲಿನ ಮೂಲಭೂತ ಹಕ್ಕು. ಯಾವುದೇ ಧರ್ಮವು ಮಾಲಿನ್ಯವನ್ನು ಉತ್ತೇಜಿಸುವ ಅಥವಾ ಜನರ ಆರೋಗ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ಚಟುವಟಿಕೆ ಉತ್ತೇಜಿಸುವುದಿಲ್ಲ ಎಂಬುದು ನಮ್ಮ ಭಾವನೆ’ ಎಂದಿದೆ.
ಇದನ್ನೂ ಓದಿ:ರಾಮೇಶ್ವರಂ ಕೆಫೆ ಕ್ಯೂನಲ್ಲಿ ನಿಲ್ಲುವಾಗ, ಐ ಹೇಟ್ ಬೆಂಗಳೂರು; ಕರಾಳ ಘಟನೆ ಬಿಚ್ಚಿಟ್ಟ ಯುವತಿ!
ಇದೇ ವೇಳೆ ತನ್ನ ಈ ಹಿಂದಿನ ಪಟಾಕಿ ನಿಷೇಧ ಆದೇಶ ಜಾರಿ ಮಾಡುವಲ್ಲಿ ಎಡವಿದ ದಿಲ್ಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪೀಠ, ‘ನೀವು ಕೇವಲ ಪಟಾಕಿ ತಯಾರಿಕಾ ಕಚ್ಚಾವಸ್ತು ವಶಪಡಿಸಿಕೊಂಡು ಕಣ್ಣೊರೆಸುವ ತಂತ್ರ ಮಾಡಿದ್ದೀರಿ’ ಎಂದು ಕುಟುಕಿತು.
‘ದಿಲ್ಲಿ ಪೊಲೀಸ್ ಆಯುಕ್ತರು ತಕ್ಷಣವೇ ಎಲ್ಲ ಮಧ್ಯಸ್ಥಿಕೆದಾರರಿಗೆ ನಿಷೇಧ ಆದೇಶದ ಬಗ್ಗೆ ತಿಳಿಸಬೇಕು. ಪಟಾಕಿಗಳ ಮೇಲಿನ ನಿಷೇಧದ ಪರಿಣಾಮಕಾರಿ ಅನುಷ್ಠಾನಕ್ಕೆ ವಿಶೇಷ ಕೋಶ ರಚಿಸಬೇಕು. ಕೈಗೊಂಡ ಕ್ರಮಗಳನ್ನು ದಾಖಲಿಸಿ ವೈಯಕ್ತಿಕ ಅಫಿಡವಿಟ್ ಸಲ್ಲಿಸಬೇಕು’ ಎಂದಿತು. ಅಲ್ಲದೆ, ‘ಪಟಾಕಿ ನಿಷೇಧದ ಆದೇಶವನ್ನು ನಾವು ಹೊರಡಿಸಿದರೂ ಅ.14ರವರೆಗೆ ಅದರ ಜಾರಿಗೆ ದಿಲ್ಲಿ ಸರ್ಕಾರ ಏಕೆ ವಿಳಂಬ ಮಾಡಿತು?’ ಎಂದೂ ಪೀಠ ಪ್ರಶ್ನಿಸಿತು.
ಇದನ್ನೂ ಓದಿ: ಮಣಿಪುರದಲ್ಲಿ ಪೊಲೀಸ್ ಠಾಣೆ, ಅಂಗಡಿಗಳಿಗೆ ಬೆಂಕಿಯಿಟ್ಟ ಉಗ್ರರು: ಗುಂಡಿಕ್ಕಿ 11 ಕುಕಿಗಳ ಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ