ಐದು ತಿಂಗಳಿಂದ ಸಂಬಳ ಇಲ್ಲ -ಆಸ್ಪತ್ರೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತು ಗೋಳಾಡಿದ ಮಹಿಳಾ ಅಧಿಕಾರಿ -Video

Published : Jul 19, 2026, 11:21 AM IST
home guard crying

ಸಾರಾಂಶ

ಜಮ್‌ಶೆಡ್‌ಪುರದ ಎಂಜಿಎಂ ಆಸ್ಪತ್ರೆಯ ಮಹಿಳಾ ಹೋಂಗಾರ್ಡ್ ಸಿಬ್ಬಂದಿಯೊಬ್ಬರು ಕಳೆದ ಐದು ತಿಂಗಳಿಂದ ಸಂಬಳವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನಾರೋಗ್ಯ ಮತ್ತು ಸಾಲದ ಬಾಧೆಯಿಂದ ಕಂಗೆಟ್ಟು, ಆಸ್ಪತ್ರೆಯ ಆವರಣದಲ್ಲೇ ಕಣ್ಣೀರು ಹಾಕುತ್ತಿರುವ ಅವರ ವಿಡಿಯೋ ವೈರಲ್ ಆಗಿದೆ.

ಜಾರ್ಖಂಡ್: ಒಂದೆಡೆ ಸರ್ಕಾರಗಳು ಮಹಿಳೆಯರ ಸಬಲೀಕರಣದ ಬಗ್ಗೆ ಭಾಷಣ ಮಾಡುತ್ತವೆ, ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತವೆ. ಆದರೆ, ಹಗಲಿರುಳು ಕಷ್ಟಪಟ್ಟು ಕೆಲಸ ಮಾಡುವ ನೌಕರರಿಗೆ ತಿಂಗಳ ಸಂಬಳ ನೀಡಲು ಮಾತ್ರ ಮೀನಾಮೇಷ ಎಣಿಸುತ್ತವೆ. ಇದಕ್ಕೆ ತಾಜಾ ಉದಾಹರಣೆ ಜಮ್‌ಶೆಡ್‌ಪುರದ ಎಂಜಿಎಂ ಆಸ್ಪತ್ರೆಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ.

ಘಟನೆಯ ವಿವರ

ಜಮ್‌ಶೆಡ್‌ಪುರದ ಎಂಜಿಎಂ (MGM) ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಹೋಂಗಾರ್ಡ್ ಸಿಬ್ಬಂದಿಯೊಬ್ಬರು, ಕಳೆದ ಐದು ತಿಂಗಳಿಂದ ತಮಗೆ ವೇತನ ಸಿಗದ ಕಾರಣಕ್ಕೆ ಕೆಲಸದ ಅವಧಿಯಲ್ಲೇ ಕಣ್ಣೀರು ಹಾಕಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯದಿಂದ ಕಂಗೆಟ್ಟಿರುವ ಈ ಅಧಿಕಾರಿ, ಆಸ್ಪತ್ರೆಯ ಆವರಣದಲ್ಲೇ ತನ್ನ ಅಳಲನ್ನು ತೋಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಳೆದ 5 ತಿಂಗಳಿಂದ ನಮಗೆ ಒಂದು ರೂಪಾಯಿ ಪಾವತಿಯಾಗಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಅನಾರೋಗ್ಯ ಪೀಡಿತಳಾದ ನನಗೆ ಚಿಕಿತ್ಸೆ ಪಡೆಯಲು ಹಣವಿಲ್ಲ. ಸಾಲಗಾರರ ಕಿರುಕುಳ ಹೆಚ್ಚಾಗಿದೆ. ಸಂಬಳ ನೀಡದಿದ್ದರೆ ನನಗೆ ಆತ್ಮ*ತ್ಯೆಯಲ್ಲದೆ ಬೇರೆ ದಾರಿಯಿಲ್ಲ ಎಂದು ಆಕೆ ಕಣ್ಣೀರಿಡುತ್ತಾ ಹತಾಶೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಜಾರ್ಖಂಡ್ ಸರ್ಕಾರದ ವಿರೋಧಾಭಾಸವನ್ನು ಎತ್ತಿ ತೋರಿಸುತ್ತಿದೆ. ಜಾರ್ಖಂಡ್ ಸರ್ಕಾರವು ಮಹಿಳೆಯರಿಗಾಗಿ 'ನಗದು ವರ್ಗಾವಣೆ' (Cash Transfer) ಯೋಜನೆಗೆ ತನ್ನ ಒಟ್ಟು ಬಜೆಟ್‌ನ ಶೇ. 8 ರಷ್ಟು ಅಂದರೆ ಬರೋಬ್ಬರಿ 14,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಭದ್ರತೆ ಒದಗಿಸುವ ಮಹಿಳಾ ಸಿಬ್ಬಂದಿಗೆ ಸಕಾಲಕ್ಕೆ ಸಂಬಳ ನೀಡಲು ವಿಫಲವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದುಡಿಯುವ ಕೈಗಳಿಗೆ ವೇತನ ನೀಡದೆ, ಯೋಜನೆಗಳ ಹೆಸರಿನಲ್ಲಿ ಹಣ ಹಂಚುವುದು ಎಷ್ಟು ಸರಿ? ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಈ ಮಹಿಳಾ ಸಿಬ್ಬಂದಿಯ ಬಾಕಿ ವೇತನವನ್ನು ಪಾವತಿಸಿ, ಅವರಿಗೆ ನ್ಯಾಯ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವು ಕಡಿತಕ್ಕೆ 54 ಇಂಜೆಕ್ಷನ್ ನೀಡಿದ ವೈದ್ಯರು.. ಬದುಕಿ ಬಂದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್!
ನೇಪಾಳ ಎಮ್ಮೆಗಳಿಗೆ ಭಾರತದ ಕೋಣಗಳ ವೀರ್ಯದಾನ!