ಮತಾಂತರಿಗಳಿಗೆ ಸುಪ್ರೀಂ ಶಾಕ್, ಕ್ರಿಶ್ಚಿಯನ್ ಸೇರಿ ಬೇರೆ ಧರ್ಮಕ್ಕೆ ಕನ್ವರ್ಟ್ ಆದ್ರೆ ದಲಿತ ಸ್ಥಾನಮಾನ ಇಲ್ಲ

Published : Mar 24, 2026, 12:20 PM IST
Supreme court

ಸಾರಾಂಶ

ಮತಾಂತರಿಗಳಿಗೆ ಸುಪ್ರೀಂ ಶಾಕ್, ಕ್ರಿಶ್ಚಿಯನ್ ಸೇರಿ ಬೇರೆ ಧರ್ಮಕ್ಕೆ ಕನ್ವರ್ಟ್ ಆದ್ರೆ ದಲಿತ ಸ್ಥಾನಮಾನ ಇಲ್ಲ, ವಿದೇಶಿ ಧರ್ಮಗಳಿಗೆ ಮತಾಂತರಗೊಂಡ ದಲಿತರಿಗೆ ಸ್ಥಾನಮಾನ ಹಾಗೂ ರಕ್ಷಣೆಕೂಡ ಸಿಗಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. 

ನವದೆಹಲಿ (ಮಾ.24) ಮತಾಂತರಗೊಳ್ಳುವವರಿಗೆ ಸುಪ್ರೀಂ ಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ಮತಾಂತರಗೊಂಡ ದಲಿತ ವ್ಯಕ್ತಿ ದಲಿತ ಸ್ಥಾನಾಮಾನಕ್ಕೆ ಸಲ್ಲಿಸಿದ ಅರ್ಜಿ ಕುರಿತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದಲಿತ ವ್ಯಕ್ತಿಯೊಬ್ಬ ವಿದೇಶಿ ಧರ್ಮಗಳಾದ ಕ್ರಿಶ್ಚಿಯನ್ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಠ ಜಾತಿ ಸ್ಥಾನಮಾನ ಉಳಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದಾರೆ. ಹಿಂದೂ, ಸಿಖ್ ಅಥವಾ ಬೌದ್ದ ಧರ್ಮ ಹೊರತು ಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಉಳಿಯಲ್ಲ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ತೀರ್ಪು ನೀಡಿದೆ. ಈ ಕುರಿತು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪುನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಸೀಮಿತ

ನ್ಯಾ. ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಪೀಠ ಈ ಮಹತ್ವದ ಆದೇಶ ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್‌ಸಿ/ಎಸ್‌ಟಿ ಕಾಯ್ದೆ)ಯ ಉಲ್ಲಂಘನೆಯನ್ನು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ. ಆಂಧ್ರಪ್ರದೇಶ ಹೈಕೋರ್ಟ್‌ ಮೇ 2025 ರ ತೀರ್ಪಿನ ವಿರುದ್ಧ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ಹೊರಬಿದ್ದಿದೆ. ಆನಂದ್ ಅವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ಜಾತಿ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿರುವ ಬಗ್ಗೆ ಆರೋಪಿಸಿದರು. ನಿಂದಿಸಿದವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದರು . ಪೊಲೀಸರು ಕೂಡ ಎಫ್ಐಆರ್ ದಾಖಲಿಸಿದ್ದರು.

ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿತ್ತು. ಇದೀಗ ಇದೇ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಜಾತಿ ತಾರತಮ್ಯವಿಲ್ಲದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಆನಂದ್, ಎಸ್‌ಸಿ ಸ್ಥಾನಮಾನವನ್ನು ರದ್ದುಗೊಳಿಸುವುದರಿಂದ, ಎಸ್‌ಸಿ ಪ್ರಮಾಣಪತ್ರವನ್ನು ಹೊಂದಿರುವುದು ಅವರ ಪ್ರಕರಣಕ್ಕೆ ಸಹಾಯ ಮಾಡುವುದಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಯಸ್ಸು 30 ಆದ್ರೂ ಮದ್ವೆಯಾಗದೇ ಸಿಂಗಲ್ ಆಗಿ ಉಳಿದವರಿಗೆ ಇದೇ ಗತಿ! ರೈಲಿನ ವಿಡಿಯೋ ವೈರಲ್
ಮಕ್ಕಳಿಗೆ ದಾರಿ ತೋರಬೇಕಾದ ಶಿಕ್ಷಕಿಯೇ ದಾರಿ ತಪ್ಪಿದಳು: ಗೆಳೆಯನ ಜೊತೆ ಸೇರಿ ಗಂಡನ ಮುಗಿಸಿದ ಸರ್ಕಾರಿ ಶಾಲೆ ಟೀಚರ್