
ನವದೆಹಲಿ[ಜ.20]: 370ನೇ ವಿಧಿ ರದ್ದಾದ ಬಳಿಕ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಬಂದ್ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸುವ ಭರದಲ್ಲಿ, ಕಾಶ್ಮೀರಿಗಳು ಅಶ್ಲೀಲ ಚಿತ್ರಗಳನ್ನು ನೋಡಲು ಮಾತ್ರ ಇಂಟರ್ನೆಟ್ ಬಳಸುತ್ತಾರೆ ಎಂದು ಹೇಳಿ ನೀತಿ ಆಯೋಗದ ಸದಸ್ಯ ಹಾಗೂ ವಿಜ್ಞಾನಿ ವಿ.ಕೆ ಸಾರಸ್ವತ್ ಎಡವಟ್ಟು ಮಾಡಿಕೊಂಡಿದ್ದಾರೆ.
ಕಣಿವೆಯಲ್ಲಿ ಪ್ರೀಪೇಯ್ಡ್ ಮೊಬೈಲ್, ಎಸ್ಎಂಎಸ್ ಸೇವೆ ಮತ್ತೆ ಆರಂಭ!
ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಅವರು ಕ್ಷಮೆ ಯಾಚಿಸಿದ್ದಾರೆ. ಗುಜರಾತ್‌ನ ಗಾಂಧಿನಗರದಲ್ಲಿ ಮಾತನಾಡಿದ ಅವರು, ಯಾಕೆ ರಾಜಕಾರಣಿಗಳು ಕಾಶ್ಮೀರಕ್ಕೆ ಹೋಗಬೇಕು? ಕಾಶ್ಮೀರದಲ್ಲಿ ಇಂಟರ್ನೆಟ್ ಬಂದ್ ಆಗಿದ್ದರಿಂದ ಆಗಿದ್ದೇನು? ಅಶ್ಲೀಲ ಚಿತ್ರ ವೀಕ್ಷಿಸುವುದು ಬಿಟ್ಟರೆ ಅವರು ಇಂಟರ್ನೆಟ್‌ನಲ್ಲಿ ಮಾಡೋದೇನು? ಎಂದು ಪ್ರಶ್ನಿಸಿದ್ದಾರೆ.
ಸದ್ಯ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ