ಯುದ್ಧ ಬೇಡ, ಶಾಂತಿ ಬೇಕು: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಲಹೆ

Published : May 10, 2025, 04:16 AM IST
ಯುದ್ಧ ಬೇಡ, ಶಾಂತಿ ಬೇಕು: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಲಹೆ

ಸಾರಾಂಶ

ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆ ಬೆನ್ನಲ್ಲೇ ಜಮ್ಮು ಕಾಶ್ಮೀರ ನಾಯಕರು ಶಾಂತಿ ಮಾತುಕತೆ ಮಾತನಾಡಿದ್ದಾರೆ. 

ಶ್ರೀನಗರ (ಮೇ.10): ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆ ಬೆನ್ನಲ್ಲೇ ಜಮ್ಮು ಕಾಶ್ಮೀರ ನಾಯಕರು ಶಾಂತಿ ಮಾತುಕತೆ ಮಾತನಾಡಿದ್ದಾರೆ. ‘ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ’ ಎಂದು ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮತ್ತು ಎಐಎಂಪಿಎಲ್‌ಬಿ ಹೇಳಿದೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ ಪಾಕಿಸ್ತಾನದ ದಾಳಿಯಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ, ಅವರು ಬಂದೂಕುಗಳನ್ನು ಮೌನಗೊಳಿಸಬೇಕು. ಪರಿಸ್ಥಿತಿ ಸಾಮಾನ್ಯಗೊಳಿಸಲು ಸಹಾಯ ಮಾಡಬೇಕು’ ಎಂದರು. ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದು,‘ ಮಿಲಿಟರಿ ಕಾರ್ಯಾಚರಣೆ ನಡೆದಾಗಲೆಲ್ಲಾ ನಾವು ನೋಡಿದ್ದೇವೆ. 

ಇದು ಯಾವುದೇ ಪರಿಹಾರವನ್ನು ತರುವುದಿಲ್ಲ. ಶಾಂತಿಯನ್ನು ಸ್ಥಾಪಿಸಲು ನೆರವಾಗುವುದಿಲ್ಲ. ಪಾಕಿಸ್ತಾನದ ಪರಿಸ್ಥಿತಿ ಚೆನ್ನಾಗಿಲ್ಲ. ಆದ್ದರಿಂದ ಎರಡೂ ದೇಶಗಳು ರಾಜಕೀಯ ಹಸ್ತಕ್ಷೇಪಕ್ಕೆ ಪ್ರಯತ್ನಿಸಬೇಕು. ಮಿಲಿಟರಿ ಹಸ್ತಕ್ಷೇಪದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ( ಎಐಎಂಪಿಎಲ್‌ಬಿ) ಕೂಡ ಈ ಬಗ್ಗೆ ಆಗ್ರಹಿಸಿದ್ದು‘ ಉಭಯ ದೇಶಗಳು ದ್ವಿಪಕ್ಷೀಯ ಸಂವಾದ, ಮತ್ತು ಚರ್ಚೆಗಳ ಮೂಲಕ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು. ಯುದ್ಧವೂ ಯಾವುದೇ ಸಮಸ್ಯೆಗೆ ಪರಿಹಾರವಲ್ಲ’ ಎಂದಿದ್ದಾರೆ.

ಪಂಜಾಬ್, ಹರ್ಯಾಣದಲ್ಲಿ ಸರ್ಕಾರಿ ಅಧಿಕಾರಿಗಳ ರಜೆ ರದ್ದು: ಭಾರತ-ಪಾಕ್ ಸಂಘರ್ಷವನ್ನು ಗಮನದಲ್ಲಿಟ್ಟುಕೊಂಡು, ಪಂಜಾಬ್ ಮತ್ತು ಹರ್ಯಾಣ ಸರ್ಕಾರಗಳು ರಾಜ್ಯಾದ್ಯಂತ ಸರ್ಕಾರಿ ನೌಕರರ ಮತ್ತು ಅಧಿಕಾರಿಗಳ ರಜೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿವೆ.ಪಂಜಾಬ್ ಸರ್ಕಾರವು ಭಾರತೀಯ ಆಡಳಿತ ಸೇವೆ (ಐಎಎಸ್) ಮತ್ತು ಪಂಜಾಬ್ ನಾಗರಿಕ ಸೇವೆಗಳ (ಪಿಸಿಎಸ್) ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಮಂಡಳಿಗಳು, ನಿಗಮಗಳು ಮತ್ತು ವಿವಿಗಳ ಎಲ್ಲಾ ನೌಕರರು ರಜೆ ಪಡೆಯದಂತೆ ಹರಿಯಾಣ ಸರ್ಕಾರ ನಿರ್ದೇಶಿಸಿದೆ.‘ಭಾರತ-ಪಾಕ್ ಸಂಘರ್ಷದ ಹಿನ್ನೆಲೆ, ರಜೆಯನ್ನು ರದ್ದುಪಡಿಸಲಾಗಿದೆ. ಯಾವುದೇ ಅಧಿಕಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಅನುಮೋದನೆಯಿಲ್ಲದೆ ರಜೆ ಪಡೆಯುವಂತಿಲ್ಲ. ಇಲ್ಲಿಯವರೆಗೆ ಅನುಮೋದಿಸಲಾದ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ’ ಎಂದು ಆಡಳಿತ ತಿಳಿಸಿದೆ.

ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿಎಂ ಸಿದ್ದರಾಮಯ್ಯ

ಪಾಕ್‌ ಹಣಕಾಸು ಇಲಾಖೆ ಎಕ್ಸ್‌ ಖಾತೆ ಹ್ಯಾಕ್‌: ಭಾರತದ ಜತೆಗಿನ ಉದ್ವಿಗ್ನತೆ ಸಮಯದಲ್ಲೇ ಪಾಕಿಸ್ತಾನದ ಹಣಕಾಸು ಸಚಿವಾಲಯದ ಎಕ್ಸ್‌ ಖಾತೆ ಹ್ಯಾಕ್‌ ಮಾಡಲಾಗಿದೆ ಹಾಗೂ ಅಸಂಬದ್ಧ ಸಂದೇಶ ಹಾಕಲಾಗಿದೆ.ಇದರ ಬೆನ್ನಲ್ಲೇ, ‘ಇದೊಂದು ಸುಳ್ಳು ಪೋಸ್ಟ್‌. ನಮ್ಮ ವಿತ್ತ ಇಲಾಖೆ ಖಾತೆ ಹ್ಯಾಕ್‌ ಆಗಿದೆ’ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೊಂಡಿದೆ. ‘ಶತ್ರುಗಳಿಂದ ದೇಶಕ್ಕೆ ಭಾರೀ ಹಾನಿಯಾಗಿದ್ದು, ಹೆಚ್ಚಿನ ಸಾಲದ ನೆರವಿಗಾಗಿ ಪಾಕಿಸ್ತಾನವು ಸರ್ಕಾರ ಅಂತಾರಾಷ್ಟ್ರೀಯ ಪಾಲುದಾರರಿಗೆ ಮನವಿ ಮಾಡುತ್ತದೆ. ಯುದ್ಧಾತಂಕ ಮತ್ತು ಷೇರುಪೇಟೆ ಕುಸಿತದ ಹಿನ್ನೆಲೆಯಲ್ಲಿ ನಾವು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸಂಘರ್ಷ ತಿಳಿಗೊಳಿಸಲು ಮನವಿ ಮಾಡುತ್ತೇವೆ’ ಎಂದು ಪೋಸ್ಟ್‌ ಹಾಕಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!