
ಮುಂಬೈ (ಜ.7): ನಟಿ ಹಾಗೂ ಸಮಾಜವಾದಿ ಪಕ್ಷದ ಮಾಜಿ ಸಂಸದೆ ಜಯಪ್ರದಾ (Jaya Prada) ಎರಡು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದಾರೆ. ಎರಡೂ ಪ್ರಕರಣಗಳಲ್ಲಿ ಮಧ್ಯಪ್ರದೇಶ ಕೋರ್ಟ್ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಆದರೆ ಸದ್ಯ ಯಾರ ಕೈಗೂ ಸಿಗದೇ ನಟಿ ತಲೆ ಮರೆಸಿಕೊಂಡಿದ್ದಾರೆ. ರಾಂಪುರ ಪೊಲೀಸರು ನಟಿಯ ಹುಡುಕಾಟಕ್ಕೆ ತಂಡವನ್ನು ರಚಿಸಿದ್ದರು. ಆದರೆ ಅವರಿಗೆ ಜಯಪ್ರದಾ ಅವರನ್ನು ಈವರೆಗೆ ಹುಡುಕಲು ಆಗಿಲ್ಲ. ಕೋರ್ಟ್ ಆದೇಶದ ಅನ್ವಯ ಜನವರಿ 10ರೊಳಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.
ಅಂದಹಾಗೆ ಈ ಎರಡೂ ಪ್ರಕರಣಗಳು 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿವೆ. 2019 ರ ಏಪ್ರಿಲ್ 19 ರಂದು ನೂರ್ಪುರ್ ಗ್ರಾಮದಲ್ಲಿ ಕೋಡ್ ಅನ್ನು ಉಲ್ಲಂಘಿಸಿ ರಸ್ತೆಯನ್ನು ಉದ್ಘಾಟಿಸಿದ ಆರೋಪದ ಮೇಲೆ ಕ್ಷೇತ್ರದ ಸ್ವರ್ ಪ್ರದೇಶದಲ್ಲಿ ಅವರ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ. ಎರಡನೇ ಪ್ರಕರಣವು ಕೆಮ್ರಿ ಪೊಲೀಸ್ ಠಾಣೆಯದ್ದಾಗಿದ್ದು, ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪ ನಟಿಯ ಮೇಲಿದೆ.
ನಟಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಮತ್ತು ಯುಪಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತು. ಇದರ ನಂತರ, ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಅವರರ ನೇತೃತ್ವದಲ್ಲಿ ಜಯಪ್ರದಾ ಅವರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿ ಆದರೆ ಈವರೆಗೆ ಪೊಲೀಸರಿಗೆ ಸಿಗದೆ ನಟಿ ಚಳ್ಳೆ ಹಣ್ಣು ತಿನ್ನಿಸಿದ್ದಾರೆ.
ವಿಶೇಷ ಪೊಲೀಸ್ ತಂಡವು ದೆಹಲಿ ಮತ್ತು ಹೈದರಾಬಾದ್‌ನಲ್ಲಿರುವ ಮನೆಯಲ್ಲಿ ಜಯಾ ಅಡಗಿರಬಹುದೆಂದು ಶೋಧಿಸಿ ಮುಂಬೈಗೆ ತೆರಳಿ ನಟಿಯ ಮನೆ ಮೇಲೆ ದಾಳಿ ನಡೆಸಿತು, ಆದರೆ ಅಲ್ಲಿಯೂ ಯಾವುದೇ ಕುರುಹು ಸಿಗಲಿಲ್ಲ. ಒಂದು ವಾರದ ಹುಡುಕಾಟದ ನಂತರ ತಂಡವು ಬರಿಗೈಯಲ್ಲಿ ಮರಳಿತು. ಮಾಜಿ ಸಂಸದೆ ಪರಾರಿಯಾಗಿದ್ದು, ಶೀಘ್ರದಲ್ಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ರಾಂಪುರ ಪೊಲೀಸರು ತಿಳಿಸಿದ್ದಾರೆ.
ಜನವರಿ 10ರಂದು ಜಯಪ್ರದಾ ಅವರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ರಾಂಪುರ ಪೊಲೀಸರಿಗೆ ಕೋರ್ಟ್ ಆದೇಶ ನೀಡಿತ್ತು. ಆದರೆ, ನಟಿ ಪತ್ತೆಯಾಗದಿದ್ದಲ್ಲಿ ಈಗ ಪೊಲೀಸ್ ವರಿಷ್ಠಾಧಿಕಾರಿ ನ್ಯಾಯಾಲಯಕ್ಕೆ ಹಾಜರಾಗಿ ಉತ್ತರಿಸಬೇಕಾಗುತ್ತದೆ. ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಚಿತ್ರರಂಗವನ್ನು ತೊರೆದ ನಟಿ 1994 ರಲ್ಲಿ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಸೇರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ