ಈಶಾನ್ಯ ಮುಂಗಾರು ಹೊಡೆತ, ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ 3 ದಿನ ಭಾರಿ ಮಳೆ!

By Suvarna NewsFirst Published Nov 1, 2022, 5:45 PM IST
Highlights

ಚೆನ್ನೈನಲ್ಲಿ ಭಾರಿ ಮಳೆಗೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈಶಾನ್ಯ ಮುಂಗಾರು ಹೊಡೆತ ಇದೀಗ ತಮಿಳುನಾಡು ಮಾತ್ರವಲ್ಲ, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ತೀವ್ರ ಹೊಡೆತ ನೀಡುತ್ತಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ.
 

ಬೆಂಗಳೂರು(ನ.01): ಈಶಾನ್ಯ ಮುಂಗಾರು ಹೊಡೆತ ದಕ್ಷಿಣ ಭಾರತಕ್ಕೆ ತೀವ್ರ ಹೊಡೆತ ನೀಡಿದೆ. ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಳು ನದಿಯಂತಾಗಿದೆ. ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಈಶಾನ್ಯ ಮುಂಗಾರು ಕೇವಲ ಚೆನ್ನೈಗೆ ಮಾತ್ರವಲ್ಲ, ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶಕ್ಕೂ ಮಳೆ ಹೊಡೆತ ನೀಡಿದೆ. ನೆವೆಂಬರ್ 3ರ ವರೆಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.  ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ನವೆಂಬರ್ 3ರ ವರೆಗೆ ಭಾರಿ ಮಳೆಯಾಗಲಿದೆ ಎಂದು ವರದಿ ಹೇಳಿದೆ. ಹವಾಮಾನ ಇಲಾಖೆ ಸೂಚನೆಯಂತೆ ನವೆಂಬರ್ 1 ರಂಜೆ ಸಂಜೆ ಬೆಂಗಳೂರು ಸೇರಿದಂತೆ ಹಲೆವೆಡೆ ಮಳೆಯಾಗಿದೆ. ಇದರಿಂದ ಪುನೀತ್ ರಾಜ್‌ಕುಮಾರ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಮಳೆ ಅಡ್ಡಿಪಡಿಸಿದೆ. ಮಳೆಯ ನಡುವೆಯೇ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.

ತಮಿಳುನಾಡಿನಲ್ಲಿ ಮುಂದಿನ ನಾಲ್ಕು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಪುದುಚೇರಿ ಹಾಗೂ ಕೇರಳದಲ್ಲಿ ನವೆಂಬರ್ 2ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. IMD ಸೂಚನೆ ಪ್ರಕಾರ, ತಮಿಳುನಾಡು, ಪುದುಚೇರಿ, ಕಾರಾಕೈಲ್(ಪುದುಚೇರಿ), ಕೇರಳ, ಮಾಹೆ, ಕರ್ನಾಟಕದ ಕೆಲ ಭಾಗ, ಆಂಧ್ರ ಪ್ರದೇಶದ ರಾಯಲಸೀಮಾ ಸೇರಿದಂತೆ ದಕ್ಷಿಣ ಭಾರತದ ಕೆಲ ಭಾಗದಲ್ಲಿ ಮಳೆಯಾಗಲಿದೆ ಎಂದಿದೆ. 

ರಾಜ್ಯಕ್ಕೆ ಮತ್ತೆ ಮಳೆ ಕಂಟಕ?: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕ ಕೆಲ ಭಾಗದಲ್ಲಿ ಭಾರಿ ಮಳೆ
ಪ್ರಸಕ್ತ ವಾರದ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿರುವ ಮಳೆ ನವೆಂಬರ್‌ನಲ್ಲಿ ಮತ್ತೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮುಂಗಾರು ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ನವೆಂಬರ್‌ 2 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಚ್‌’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ತಾಪಮಾನ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌, ಮಂಗಳೂರಿನಲ್ಲಿ ತಾಪಮಾನ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

click me!