
ನವದೆಹಲಿ(ಜೂ.10): ಕೋವಿಡ್ ಲಸಿಕೆ ಪಡೆದವರಿಗೆ ಆನ್‌ಲೈನ್ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಆರೋಗ್ಯ ಸೇತು ಆ್ಯಪ್‌ನ ಅಧಿಕೃತ ಟ್ವೀಟರ್ ಖಾತೆಯಿಂದ ಮಾಹಿತಿ ನೀಡಲಾಗಿದೆ.
ಈ ಅವಕಾಶದ ಅನ್ವಯ ಪ್ರಮಾಣಪತ್ರದಲ್ಲಿ ಹೆಸರು, ಜನ್ಮವರ್ಷ, ಲಿಂಗದಲ್ಲಿ ಆಗಿರುವ ಯಾವುದೇ ತಪ್ಪು ಮಾಹಿತಿಯನ್ನು ಸ್ವತಃ, ಲಸಿಕೆ ಪಡೆದವರು ಬದಲಾವಣೆ ಮಾಡಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣ ಸೇರಿದಂತೆ ನಾನಾ ವಿಷಯಗಳಿಗೆ ಕೋವಿಡ್ ಪ್ರಮಾಣ ಪತ್ರ ಕಡ್ಡಾಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ದೋಷ ತಿದ್ದುಪಡಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬಳಕೆದಾರರು ಕೋವಿನ್ ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಈ ಬದಲಾವಣೆ ಮಾಡಿಕೊಳ್ಳಬಹುದು.
ಕೋವಿಡ್ ಲಸಿಕೆ ಪಡೆದುಕೊಂಡವರಿಗೆ ತಮ್ಮ ಸ್ಟೇಟಸ್ ಅಪ್‌ಡೇಟ್ ಮಾಡುವ ಅವಕಾಶವನ್ನು ಕೆಲ ದಿನಗಳ ಹಿಂದೆ ಸರ್ಕಾರ ಕಲ್ಪಿಸಿತ್ತು. ಅದರನ್ವಯ ಮೊದಲ ಡೋಸ್ ಪಡೆದುಕೊಂಡವರಿಗೆ ನೀಲಿ ಬಣ್ಣದ ಬಾರ್ಡರ್ ಬರುತ್ತಿದ್ದರೆ, 2 ಡೋಸ್ ಪಡೆದುಕೊಂಡವರಿಗೆ ಡಬ್ಬಲ್ ಬಾರ್ಡರ್ ಬರುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ