
ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್‌ಒ) ಸಂಘಟನೆಯು ಗ್ರಾಹಕರಿಗೆ ಭವಿಷ್ಯ ನಿಧಿ (ಇಪಿಎಫ್) ಹಣವನ್ನು ಎಟಿಎಂ, ಯುಪಿಐ ಮೂಲಕ ಹಿಂಪಡೆಯುವ ಯೋಜನೆ ಮೇ ಅಂತ್ಯ ಜೂನ್‌ನಿಂದ ಜಾರಿಗೆ ಬರಲಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಈವರೆಗೆ ಪಿಎಫ್ ಹಣ ಪಡೆಯಲು ಚಂದಾದಾರರು ಪಿಎಫ್ ಆಫೀಸಿಗೆ ಎಡತಾಕಬೇಕಿತ್ತು. ಇದನ್ನು ತಪ್ಪಿಸಲು ಎಟಿಎಂ ಮತ್ತು ಯುಪಿಐ ಮೂಲಕ ಪಿಎಫ್ ಹಣ ವಿಥ್ ಡ್ರಾ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅನುಮೋದಿಸಿದೆ.ಈ ಬಗ್ಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿ ಸುಮಿತ್ರಾ ದಾವ್ರಾ ಮಾಹಿತಿ ನೀಡಿದ್ದು, ‘ಈ ವರ್ಷದ ಮೇ ಅಂತ್ಯ ಅಥವಾ ಜೂನ್ ವೇಳೆಗೆ ಪಿಎಫ್ ಗ್ರಾಹಕರು ಯುಪಿಐ ಮತ್ತು ಎಟಿಎಂ ಮೂಲಕ ಹಣವನ್ನು ಹಿಂಪಡೆಯಲು ಸಾಧ್ಯವಾಗುತ್ತದೆ. ಅವರು ತಮ್ಮ ಪಿಎಫ್ ಖಾತೆಯ ಬಾಕಿಯನ್ನು ನೇರವಾಗಿ ಯುಪಿಐನಲ್ಲಿ ನೋಡಬಹುದು. ಸ್ವಯಂ ಚಾಲಿತ ವ್ಯವಸ್ಥೆಯ ಮೂಲಕ ತಕ್ಷಣವೇ 1 ಲಕ್ಷ ರು.ವರೆಗೆ ತಮ್ಮ ಆದ್ಯತೆಯ ಬ್ಯಾಂಕ್ ಖಾತೆ ಮೂಲಕ ಹಿಂಪಡೆಯಲು ಮತ್ತು ವರ್ಗಾವಣೆ ಮಾಡಲು ಸಾಧ್ಯವಾಗುತ್ತದೆ’ ಎಂದಿದ್ದಾರೆ. ಎಟಿಎಂ, ಯುಪಿಐ ಮೂಲಕ ಪಿಎಫ್ ಹಣವನ್ನು ಅನಾರೋಗ್ಯ, ವಸತಿ, ಶಿಕ್ಷಣ ಮತ್ತು ಮದುವೆ ಕಾರಣಗಳಿಗೆ ಹಿಂಪಡೆಯಬಹುದು.
ಫಿಎಫ್ ನಿಯಮದಲ್ಲಿ ಮಹತ್ವದ ಬದಲಾವಣೆ, ಪ್ರತಿ ಉದ್ಯೋಗಿಗಳು ತಿಳಿದುಕೊಳ್ಳಿ ರೂಲ್ಸ್
ಏ.1ರಿಂದ ಟೋಲ್ ದರದಲ್ಲಿ ಕೊಂಚ ವಿನಾಯ್ತಿ: ಗಡ್ಕರಿ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಸುಂಕ ಕೇಂದ್ರದಲ್ಲಿ ಪ್ರಯಾಣಿಕರಿಗೆ ಸುಲಭವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಏ.1ರ ಒಳಗೆ ಹೊಸ ಟೋಲ್ ಸುಂಕ ನೀತಿಯನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ ವಾಹನ ಸವಾರರಿಗೆ ರಿಯಾಯ್ತಿ ಇರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಇಂಡಿಯಾ ಟುಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ನೀತಿಯಲ್ಲಿ ಪ್ರಯಾಣಿಕರಿಗೆ ಸ್ವಲ್ಪ ಪ್ರಮಾಣದಲ್ಲಿ ರಿಯಾಯ್ತಿ ದೊರೆಯುತ್ತದೆ. ಜೊತೆಗೆ ಸುಂಕ ವಸೂಲಿಯೂ ಸರಳೀಕರಿಸಲಾಗಿದೆ. ಇದರಿಂದ ಜನರಿಗೆ ಹೆಚ್ಚು ಅನುಕೂಲವಾಗಲದೆ ಎಂದು ಹೇಳಿದರು. ಟೋಲ್ ಸಂಗ್ರಹದ ಬಗ್ಗೆ ಮಾಹಿತಿ ನೀಡಿದ ಅವರು, 2023-24ರಲ್ಲಿ 64,809.86 ಕೋಟಿ ರು. ಟೋಲ್ ಸಂಗ್ರಹವಾಗಿದೆ. ಇದು ಶೇ.35ರಷ್ಟು ವೃದ್ಧಿಯಾಗಿದೆ ಎಂದು ತಿಳಿಸಿದರು.
ಕಂಪನಿ ನಿಮ್ಮ ಪಿಎಫ್ ಖಾತೆಗೆ ಹಣ ಹಾಕ್ತಿದ್ಯಾ? ಚೆಕ್ ಮಾಡಿ ಕೊಳ್ಳದೇ ಹೋದ್ರೆ ಮಿಸ್ ಆಗ್ಬುಹುದು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ