ಹೊಸ ಸಂಸತ್ ಭವನ ಉದ್ಘಾಟನೆ ವಿವಾದ, ವಿಪಕ್ಷಗಳ ಬಹಿಷ್ಕಾರ ನಡುವೆ ಕೇಂದ್ರಕ್ಕೆ ಸಿಎಂ ಪಟ್ನಾಯಕ್ ಬೆಂಬಲ

Published : May 24, 2023, 09:26 PM IST
ಹೊಸ ಸಂಸತ್ ಭವನ ಉದ್ಘಾಟನೆ ವಿವಾದ, ವಿಪಕ್ಷಗಳ ಬಹಿಷ್ಕಾರ ನಡುವೆ ಕೇಂದ್ರಕ್ಕೆ ಸಿಎಂ ಪಟ್ನಾಯಕ್ ಬೆಂಬಲ

ಸಾರಾಂಶ

ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭದಿಂದ 19 ವಿಪಕ್ಷಗಳು ಹಿಂದೆ ಸರಿದಿದೆ. ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟನೆ ಮಾಡಬಾರದು.ರಾಷ್ಟ್ರಪತಿ ಕೈಯಿಂದ ಮಾಡಬೇಕು ಅನ್ನೋದು ವಿಪಕ್ಷಗಳ ಒತ್ತಾಯ. ಇದರ ನಡುವೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ಖಚಿತಪಡಿಸಿದ್ದಾರೆ.

ನವದೆಹಲಿ(ಮೇ.24): ಹೊಸ ಸಂಸತ್ ಭವನ್ ಭಾರಿ ವಿವಾದಕ್ಕೆ ಕಾರಣವಾಗಿದೆ. ಮೇ.28 ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಸಂಸತ್ ಭವನ ಉದ್ಘಾಟನೆ ಮಾಡಲಿದ್ದಾರೆ. ಆದರೆ ಪ್ರಧಾನಿ ಮೋದಿ ಬದಲು ರಾಷ್ಟ್ರಪತಿ ಕೈಯಿಂದ ಉದ್ಘಾಟನೆ ಮಾಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದೆ. ಇದೀಗ 19 ವಿಪಕ್ಷಗಳು ಉದ್ಘಾಟನಾ ಕಾರ್ಯಕ್ರಮಕ್ಕೆಬಹಿಷ್ಕಾರ ಹಾಕಿದೆ. ಇದರ ನಡುವೆ ಒಡಿಶಾದ ಬಿಜು ಜನತಾದಳ ಮುಖ್ಯಸ್ಥ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರಕ್ಕೆ ಬೆಂಬಲ ಸೂಚಿಸಿದ್ದಾರೆ. ಹೊಸ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.

ರಾಷ್ಟ್ರಪತಿ ಭಾರತದ ಮುಖ್ಯಸ್ಥರಾಗಿತ್ತಾರೆ. ಭಾರತ 140 ಕೋಟಿ ಜನರ ಸಂಸತ್ತಿನ ಪ್ರತಿನಿಧಿಗಳಾಗಿದ್ದಾರೆ. ಸಂಸತ್ ಹಾಗೂ ರಾಷ್ಟ್ರಪತಿ ಭಾರತದ ಪ್ರಜಾಪ್ರಭುತ್ವದ ಪ್ರಮುಖ ಅಂಗ. ಎರಡೂ ಅಂಗಗಳ ಗೌರವವನ್ನು ನಾವು ಕಾಪಾಡಿಕೊಳ್ಳಬೇಕು. ಇಲ್ಲಿ ಯಾರು ಮೇಲು? ಯಾರಿಂದ ಉದ್ಘಾಟನೆ ಮಾಡಬೇಕು ಅನ್ನೋ ಚರ್ಚೆಯನ್ನು ಮುಂದಿನ ದಿನಗಳಲ್ಲಿ ಮಾಡಬಹುದು. ಆಗಸ್ಟ್ ತಿಂಗಳಲ್ಲಿ ನಡೆಯುವ ಕಲಾಪದಲ್ಲಿ ಈ ವಿಚಾರ ಚರ್ಚೆಯಾಗಲಿ. ಸದ್ಯ ಈ ಮಹತ್ವದ ಹಾಗೂ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜು ಜನತಾ ದಳ ಭಾಗಿಯಾಗಲಿದೆ ಎಂದು ಬಿಜೆಪಿ ವಕ್ತಾರ ಹೇಳಿದ್ದಾರೆ.

 

ಸಂಸತ್‌ ಭವನ ಉದ್ಘಾಟನೆಯ ಸಮಯ ಸರಿಯಿಲ್ಲ, ಪ್ಲೀಸ್‌ ಬದಲಾಯಿಸಿ ಎಂದು ಜ್ಯೋತಿಷಿಯ ಮನವಿ!

ಇಂದು  ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ 19 ಪಕ್ಷಗಳು, ‘ಸಂಸತ್‌ ಭವನದ ಉದ್ಘಾಟನೆ ಮಹತ್ವಪೂರ್ಣ ಘಟನೆ. ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಮತ್ತು ಯಾವ ರೀತಿ ಸರ್ವಾಧಿಕಾರಿ ಧೋರಣೆಯಲ್ಲಿ ಸಂಸತ್‌ ಭವನವನ್ನು ನಿರ್ಮಿಸಲಾಯಿತೋ ಅದಕ್ಕೆ ತೀವ್ರ ವಿರೋಧದ ಹೊರತಾಗಿಯೂ ನಾವು ನಮ್ಮ ಭಿನ್ನಾಭಿಪ್ರಾಯ ಮರೆತು ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆವು. ಆದರೆ ಪ್ರಧಾನಿ ನರೇಂದ್ರ ಮೋದಿ ತಾವೇ ಸಂಸತ್‌ ಭವನ ಉದ್ಘಾಟನೆಗೆ ನಿರ್ಧರಿಸಿರುವುದು ಮತ್ತು ಉದ್ಘಾಟನಾ ಕಾರ್ಯಕ್ರಮದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಅವರಿಗೆ ಮಾಡಿದ ಭಾರೀ ಅಪಮಾನ ಮಾತ್ರವಲ್ಲ,  ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ಇದಕ್ಕೆ ಒಮ್ಮತದ ಪ್ರತಿಕ್ರಿಯೆ ಅಗತ್ಯವಾಗಿದೆ. ಪ್ರಜಾಪ್ರಭುತ್ವದ ಆತ್ಮವನ್ನೇ ಕಿತ್ತೊಗೆದ ಮೇಲೆ ಕಟ್ಟಡಕ್ಕೆ ಯಾವುದೇ ಮೌಲ್ಯ ಇಲ್ಲ ಎಂಬುದು ನಮ್ಮ ಅಭಿಮತ. ಹೀಗಾಗಿ ನಾವು ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದೇವೆ’ ಎಂದು ಹೇಳಿವೆ.

Historic Sceptre Sengol: ಕಾಂಗ್ರೆಸ್‌ ಮರೆತಿದ್ದ ರಾಜದಂಡವನ್ನು ಹೊಸ ಸಂಸತ್ತಿನಲ್ಲಿ ಇಡಲಿರುವ ಪ್ರಧಾನಿ ಮೋದಿ!

ಶತಮಾನದಲ್ಲಿ ಒಮ್ಮೆ ಕಾಣಿಸಿಕೊಳ್ಳಬಹುದಾದ ಕೋವಿಡ್‌ ಸಾಂಕ್ರಾಮಿಕದಂಥ ಸಂದರ್ಭದಲ್ಲಿ ಭಾರೀ ವೆಚ್ಚದಲ್ಲಿ ನೂತನ ಸಂಸತ್‌ ಭವನ ಕಟ್ಟಡಲಾಗಿದೆ. ಪ್ರಜಾಪ್ರಭುತ್ವದ ಆತ್ಮವನ್ನೇ ಕಿತ್ತೊಗೆದಿರುವಾಗ, ಹೊಸ ಕಟ್ಟಡಕ್ಕೆ ಮೌಲ್ಯವೇ ಇರುವುದಿಲ್ಲ. ಹೀಗಾಗಿ ನಾವು ಒಂದಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ’ ಎಂದು ವಿಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ