
ನವದೆಹಲಿ(ಸೆ.10) ಸಂಸತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.100 ಡಿಜಿಟಲೀಕರಣದ ಮೂಲಕ ಅಧಿವೇಶನ ನಡೆಯಲಿದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ಸಂಸದರು ಈಗಾಗಲೇ ತಮ್ಮ ಪ್ರಶ್ನೆಗಳನ್ನು ಆನ್ ಲೈನ್ ಮೂಲಕ ಕಳುಹಿಸಿದ್ದಾರೆ. ಎಲ್ಲಾ ಸಂಸದರು ಕೋವಿಡ್ ಟೆಸ್ಟ್ ಗೆ ಒಳಗಾಗುವುದು ಕಡ್ಡಾಯ. ಮೊಬೈಲ್ ಆಪ್ ಮೂಲಕ ಸಂಸದರ ಹಾಜರಾತಿ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿಕ್ಷಕರು ಮತ್ತು ವೈದ್ಯರ ಮೇಲೆ ಏರಗಿದ ಕೊರೋನಾ
ಪ್ರೇಕ್ಷಕರ ಗ್ಯಾಲರಿ ಸೇರಿದಂತೆ 257 ಸಂಸದರು ಲೋಕಸಭೆಯಲ್ಲಿ ಕೂರಬಹುದು. ಉಳಿದವರಿಗೆ ರಾಜ್ಯಸಭೆಯಲ್ಲಿ ಕೂರಲು ಅವಕಾಶ ಮಾಡಿಕೊಡಲಾಗಿದೆ. ಒಂದೇ ಸಮಯದಲ್ಲಿ ವರ್ಚುವಲ್ ವೇದಿಕೆ ಮೂಲಕ ಅಧಿವೇಶನ ನಡೆಯಲಿದೆ. ಸೆಪ್ಟೆಂಬರ್ 14 ರಿಂದ ಅಧಿವೇಶನ ಆರಂಭವಾಗಲಿದೆ ಎಂದು ತಿಳಿಸಿದರು.
ಕೊರೋನಾದ ಸವಾಲುಗಳ ನಡುವೆ ಅಧಿವೇಶನ ನಡೆಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ, ಜಿಎಸ್‌ಟಿ, ಜಿಡಿಪಿ ಕುಸಿತ ಸೇರಿದಂತೆ ಅನೇಕ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ