
ಬೆಂಗಳೂರು(ನ.27): ಕೊರೋನಾ ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಜಗತ್ತು ಇದೀಗ ಮತ್ತೆ ಲಾಕ್‌ಡೌನ್ ಮೊರೆ ಹೋಗುವ ಪರಿಸ್ಥಿತಿ ಎದುರಾಗುತ್ತಿದೆ. ಅತೀ ವೇಗವಾಗಿ ಹರಡಬಲ್ಲ, ಲಸಿಕೆಗೂ ನಾಟದ ಒಮಿಕ್ರಾನ್ ಹೊಸ ರೂಪಾಂತರಿ(Omicron variant) ತಳಿ ಸೌತ್ ಆಫ್ರಿಕಾದಲ್ಲಿ(South Africa) ಪತ್ತೆಯಾಗಿದೆ. ಈ ಹೊಸ ತಳಿ ಇದೀಗ ಬ್ರಿಟನ್‌ನಲ್ಲೂ ಪತ್ತೆಯಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಬೆಂಗಳೂರಿಗೆ(Bengaluru) ಆಗಮಿಸಿದ ಸೌತ್ ಆಫ್ರಿಕಾದ ಇಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ.
ಸೌತ್ ಆಫ್ರಿಕಾದಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(Kempegowda International Airport in Bengaluru) ಆಗಮಿಸಿದ ಹಲವು ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೋನಾ(Coronavirus) ಇರುವುದು ದೃಢಪಟ್ಟಿದೆ. ಸೌತ್ ಆಫ್ರಿಕಾದಲ್ಲಿ ಪತ್ತೆಯಾದ ಓಮಿಕ್ರಾನ್ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಸೌತ್ ಆಫ್ರಿಕಾದಿಂದ ಆಗಮಿಸಿದ ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಪತ್ತೆಯಾಗಿರುವುದು ಸರ್ಕಾರಕ್ಕೂ ತಲೆನೋವಾಗಿದೆ.
ಓಮಿಕ್ರಾನ್ ಆತಂಕ ಹೆಚ್ಚಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅಧ್ಯಕ್ಷತೆಯಲ್ಲಿ ಕೋವಿಡ್ ಸಭೆ ನಡೆಸಲಾಗಿದೆ. ಉನ್ನತ ಮಟ್ಟದ ಸಭೆಯಲ್ಲಿ ಮೋದಿ, ಕಟ್ಟು ನಿಟ್ಟಿನ ಮಾರ್ಗಸೂಚಿ ಪಾಲನೆ ಮಾಡಲು ಸೂಚನೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ನಿರ್ದೇಶಿಸಿದ್ದಾರೆ. ಮೋದಿ ಸಭೆ ಬಳಿಕ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಸಭೆ ನಡೆಸಿದ್ದಾರೆ. ಕೆಲ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲು ಸೂಚನೆ ನೀಡಿದ್ದಾರೆ. ಮತ್ತೊಂದು ಸುತ್ತಿನ ಸಭೆಯನ್ನು ಸೋಮವಾರ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ಬೆಳವಣಿಗೆ ನಡುವೆ ಸೌತ್ ಆಫ್ರಿಕಾದ ಇಬ್ಬರಲ್ಲಿ ಕೊರೋನಾ ಪತ್ತೆಯಾಗಿರುವುದು ನೆಮ್ಮದಿ ಕೆಡಿಸಿದೆ. ಸೌತ್ ಆಫ್ರಿಕಾದಲ್ಲಿ ಪತ್ತೆಯಾಗಿರುವುದು ಕೊರೋನಾ ವೈರಸ್. ಆದರೆ ಇವರಲ್ಲಿ ಓಮಿಕ್ರಾನ್ ವೈರಸ್ ಇದೆಯಾ ಎಂದು ಹೆಚ್ಚಿನ ಪರೀಕ್ಷೆ ನಡೆಸಲಾಗಿದೆ. ಈ ವರದಿಗಾಗಿ ರಾಜ್ಯ ಸರ್ಕಾರವೂ ಕಾಯುತ್ತಿದೆ.
Omicron variant: ಹೊಸ ಕೋವಿಡ್ ರೂಪಾಂತರಿ ತಳಿ ಆತಂಕ, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ!
ಸೌತ್ ಆಫ್ರಿಕಾ ಪ್ರಜೆಗಳಲ್ಲಿ ಕೊರೋನಾ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದೆ. ಸೌತ್ ಆಫ್ರಿಕಾದಿಂದ 1,000ಕ್ಕೂ ಹೆಚ್ಚು ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಎಲ್ಲರ ಕೋವಿಡ್ ಪರೀಕ್ಷೆ ಮಾಡಲಾಗಿದೆ. 10 ದಿನಗಳ ಬಳಿಕ ಮತ್ತೆ ಇದೇ ಪ್ರಯಾಣಿಕರ ಕೋವಿಡ್ ಪರೀಕ್ಷೆ ಮಾಡಲಾಗುವುದು. ಇವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆ ಮಾಡಿಸಲಾಗುವುದು ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಓಮಿಕ್ರಾನ್ ವೈರಸ್ ಆತಂಕ ಹೆಚ್ಚಾಗುತ್ತಿದೆ. ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಇದರ ನಡುವೆ ಬ್ರಿಟನ್‌ನಲ್ಲಿ ಎರಡು ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಸೌತ್ ಆಫ್ರಿಕಾದಿಂದ ಬ್ರಿಟನ್‌ಗೆ ತೆರಳಿದ ಇಬ್ಬರು ಪ್ರಯಾಣಿಕರಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ ಎಂದು ಸೌತ್ ಆಫ್ರಿಕಾ ಆರೋಗ್ಯ ಸಚಿವ ಸಾಜಿದ್ ಜಾವಿದ್ ಸ್ಪಷ್ಪಡಿಸಿದ್ದಾರೆ.
ಲಂಡನ್‌ನ ಚೆಲ್ಮ್ಸ್‌ಪೋರ್ಡ್ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಇಬ್ಬರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನು ಇಬ್ಬರ ಕುಟುಂಬಸ್ಥರನ್ನು ಪರೀಕ್ಷೆ ಮಾಡಿಸಲಾಗಿದೆ. ಕುಟುಂಬದ ಸದಸ್ಯರನ್ನು ಹಾಗೂ ಸಂಪರ್ಕಿತರನ್ನು ಐಸೋಲೇಶನ್‌ಗೆ ಒಳಪಡಿಸಲಾಗಿದೆ. ಸೌತ್ ಆಫ್ರಿಕಾದಿಂದ ಇತರ ದೇಶಗಳಿಗೆ ತೆರಳುತ್ತಿರುವವರಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಆತಂಕ ಹೆಚ್ಚಾಗುತ್ತಿದೆ.
ಓಮಿಕ್ರಾನ್ ರೂಪಾಂತರಿ ತಳಿ ವೈರಸ್ ಅತ್ಯಂತ ಡೇಂಜರಸ್ ವೈರಸ್. ಈ ವೈರಸ್ ಬೋಟ್ಸ್‌ವನಾ, ಇಸ್ವಾಟಿನಿ, ಲೆಸೊಥೊ, ನಮೀಬಿಯಾ, ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯಲ್ಲಿ ಪತ್ತೆಯಾಗಿದೆ. ಅತೀ ವೇಗದಲ್ಲಿ ಈ ವೈರಸ್ ಹರಡು ಸಾಮರ್ಥ್ಯ ಹೊಂದಿದೆ. ಲಸಿಕೆಗೂ ಬಗ್ಗದ ಈ ವೈರಸ್ ಇದೀಗ ಬ್ರಿಟನ್‌ನಲ್ಲೂ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಪತ್ತೆಯಾದ ಎರಡು ಕೊರೋನಾ ವೈರಸ್ ಒಮಿಕ್ರಾನ್ ಆಗದಿರಲಿ ಅನ್ನೋದೆ ಕನ್ನಡಿಗರ ಪ್ರಾರ್ಥನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ