ಅಕ್ಟೋಬರ್ ವರೆಗೆ ರೈತ ಪ್ರತಿಭಟನೆ ಖಚಿತ; ಕಿಸಾನ್ ಸಂಘದ ನಾಯಕನ ಘೋಷಣೆ

Published : Feb 02, 2021, 07:15 PM ISTUpdated : Feb 02, 2021, 07:17 PM IST
ಅಕ್ಟೋಬರ್ ವರೆಗೆ ರೈತ ಪ್ರತಿಭಟನೆ ಖಚಿತ; ಕಿಸಾನ್ ಸಂಘದ ನಾಯಕನ ಘೋಷಣೆ

ಸಾರಾಂಶ

ಈಗಾಗಲೇ 2 ತಿಂಗಳ ಕಳೆದಿರುವ ರೈತ ಪ್ರತಿಭಟನೆ ಇನ್ನೆಷ್ಟು ದಿನ? ರೈತರ ಬೇಡಿಕೆಯನ್ನು ಕೇಂದ್ರ ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತಾ? ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ಎಲ್ಲೀವರೆಗೆ ಮುಂದುವರೆಯಲಿದೆ? ಈ ಕುರಿತ ರೈತ ನಾಯಕರು ಅಧೀಕೃತ ಹೇಳಿಕೆ ನೀಡಿದ್ದಾರೆ..

ನವದೆಹಲಿ(ಫೆ.02):  ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದೆರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಹಿಂಸಾ ರೂಪ ಪಡೆದು ಕೋಲಾಹಲ ಸೃಷ್ಟಿಸಿದೆ. ಇದೀಗ ಫೆ.6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಿದೆ. ಇದರ ನಡುವೆ ಎಲ್ಲರನ್ನು ಒಂದು ಪ್ರಶ್ನೆ ಕಾಡುತ್ತಿದೆ. ರೈತ ಪ್ರತಿಭಟನೆ ಎಲ್ಲೀವರಗೆ ನಡೆಯಲಿದೆ?  ಇದೀಗ  ಈ ಕುತೂಹಲಕ್ಕೆ ಭಾರತೀಯ ಕಿಸಾನ್ ಯೂನಿಯನ್ ಸಂಘದ ನಾಯಕ ರಾಕೇಶ್ ಟಿಕೈಟ್ ಅಧೀಕೃತ ಹೇಳಿಕೆ ನೀಡಿದ್ದಾರೆ.

ಫೆ.6ಕ್ಕೆ ಭಾರತ್ ಬಂದ್? ಏನಿದು ರೈತರು ಘೋಷಿಸಿದ ಚಕ್ಕಾ ಜಾಮ್ ಪ್ರತಿಭಟನೆ?

ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸುವ ವರೆಗೆ ಪ್ರತಿಭಟನೆ ಮುಂದುವರೆಯಲಿದೆ. ಅಕ್ಟೋಬರ್ ವರೆಗೆ ಪ್ರತಿಭಟನೆ ಮುಂದುವರಿಯುವುದು ಎಂದು ರಾಕೇಶ್ ಟಿಕೈಟ್ ಹೇಳಿದ್ದಾರೆ. ಸಿಂಘು ಗಡಿಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಟಿಕೈಟ್, ಬೇಡಿಕೆ ಈಡೇರುವವರೆಗೆ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಕ್ಟೋಬರ್ ವರೆಗೆ ಖಚಿತ ಎಂದಿದ್ದಾರೆ.

 

ವಿರೋಧ ಪಕ್ಷಗಳು ರೈತ ಪ್ರತಿಭಟನೆಗೆ ಆಗಮಿಸುವುದರ ಕುರಿತ ನಮಗೇನು ಅಭ್ಯಂತರವಿಲ್ಲ. ಆದರೆ ಪ್ರತಿಭಟನೆನಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಟಿಕೈಟ್ ಹೇಳಿದ್ದಾರೆ.

ಜನವರಿ 26 ರಂದು ರೈತರು ಆಯೋಜಿಸಿದ್ದ ಟ್ರಾಕ್ಟರ್ ರ್ಯಾಲಿ ಹಿಂಸಾ ರೂಪ ಪಡೆದಿತ್ತು. 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿ, ಕೆಂಪು ಕೋಟೆಗೆ ಮುತ್ತಿಗೆ ಹಾಕಲಾಗಿತ್ತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?