online betting app tragedy: ಆನ್ಲೈನ್ ಬೆಟ್ಟಿಂಗ್‌ನಲ್ಲಿ ಒಂದು ಲಕ್ಷ ಕಳೆದುಕೊಂಡ ವಿದ್ಯಾರ್ಥಿ ಸಾವಿಗೆ ಶರಣು

Published : Dec 26, 2025, 11:35 AM ISTUpdated : Dec 26, 2025, 11:41 AM IST
Telangana Teen Dies By Suicide After Losing Rs 1 Lakh In Online Betting

ಸಾರಾಂಶ

ಆನ್‌ಲೈನ್ ಬೆಟ್ಟಿಂಗ್ ಆಪ್‌ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ.

ಹೈದರಾಬಾದ್‌: ಆನ್‌ಲೈನ್ ಬೆಟ್ಟಿಂಗ್ ಆಪ್‌ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ. ವಿಕ್ರಂ ಸಂಗಾರೆಡ್ಡಿ ಜಿಲ್ಲೆಯ ಕಂದುಕೂರ್ ಪ್ರದೇಶದ ನಿವಾಸಿಯಾಗಿದ್ದ. ಕೀಟನಾಶಕ ಸೇವಿಸಿ ವಿಕ್ರಂ ಆತ್ಮ*ಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕೂಡಲೇ ಗಮನಿಸಿದ ವಿಕ್ರಂನ ಕುಟುಂಬದವರು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರೆಯದ ವಯಸ್ಸಿನ ಮಗಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಗಾರೆಡ್ಡಿ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ 2ನೇ ಆನ್‌ಲೈನ್ ಬೆಟ್ಟಿಂಗ್ ಸಂಬಂಧಿ ಸಾವು ಪ್ರಕರಣ ಇದಾಗಿದೆ. ವಾರದ ಹಿಂದೆ ಟಾಕ್ಸಿ ಚಾಲಕನೋರ್ವ ಸಾವಿಗೆ ಶರಣಾಗಿದ್ದ. ಈತನೂ ಆನ್‌ಲೈನ್ ಬೆಟ್ಟಿಂಗ್ ಆಪ್‌ನಲ್ಲಿ ಸಾಕಷ್ಟು ಹಣ ಹೂಡಿಕೆ ಮಾಡಿದ್ದ, ಇದರಿಂದ ಈತ ಊರು ತುಂಬಾ ಸಾಲ ಮಾಡಿಕೊಂಡಿದ್ದ. ಯಾದಗಿರಿ-ಭುವನಗಿರಿ ಜಿಲ್ಲೆಯ ನಿವಾಸಿಯಾದ 24 ವರ್ಷದ ಪಾಲುಡುಗು ಸಾಯಿ ಸಾವಿಗೆ ಶರಣಾದ ಟಾಕ್ಸಿ ಚಾಲಕ. ಕಳೆದೆರಡು ವರ್ಷಗಳಿಂದ ಈತ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್ ಗೀಳು ಬೆಳೆಸಿಕೊಂಡಿದ್ದ ಸಾಯಿ ಬೆಟ್ಟಿಂಗ್ ಆಡುವುದನ್ನು ಮುಂದುವರಿಸುವುದಕ್ಕೆ ಸ್ನೇಹಿತರು ಹಾಗೂ ಸಂಬಂಧಿಕರ ಬಳಿ ಸಾಕಷ್ಟು ಸಾಲ ಮಾಡಿದ್ದ. ಇದರ ಜೊತೆಗೆ ಆತ ಹಲವು ಬ್ಯಾಂಕ್‌ಗಳಲ್ಲಿ ವೈಯಕ್ತಿಕ ಸಾಲವನ್ನು ಮಾಡಿದ್ದ ಆತನ ಸಾವಿನ ವೇಳೆ ಸಾಯಿ 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲ ನೀಡಿದವರು ಸಾಲ ವಾಪಸ್ ಮಾಡುವಂತೆ ಕೇಳುತ್ತಿದ್ದಿದ್ದರಿಂದ ಭಯ ಹಾಗೂ ಆತಂಕಗೊಂಡ ಸಾಯಿ ಕೀಟ ನಾಶಕ ಸೇವಿಸಿ ಸಾವಿಗೆ ಶರಣಾಗಿದ್ದಾನೆ. ಕೂಡಲೇ ಸಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶಿಶು ಮಾರಾಟ ಜಾಲ ಬೇಧಿಸಿದ ಪೊಲೀಸರು: ಒಂದು ಮಗುವಿಗೆ 15 ಲಕ್ಷ: ಆಸ್ಪತ್ರೆಗಳ ಜೊತೆ ಖದೀಮರ ಸಂಪರ್ಕ

ಹಾಗೆಯೇ ಮಧ್ಯಪ್ರದೇಶದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಸಿವಿಲ್ ಕಂಟ್ರಾಕ್ಟರ್‌ವೊಬ್ಬರು ಆನ್‌ಲೈನ್ ಗೇಮ್ ಆಡಿ 30 ಲಕ್ಷ ರೂಪಾಯಿ ಕಳೆದುಕೊಂಡ ನಂತರ ಸಾವಿಗೆ ಶರಣಾಗಿದ್ದಾರೆ. 32 ವರ್ಷ ಪ್ರಾಯದ ಅವರು ಇಷ್ಟೊಂದು ಹಣ ಆನ್‌ಲೈನ್ ಗೇಮ್ ಆಡಿ ಕಳೆದುಕೊಂಡ ನಂತರ ಭೋಪಾಲ್‌ನ ತಮ್ಮ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. ಆನ್‌ಲೈನ್‌ನಲ್ಲಿ ಏವಿಯೇಟರ್ ಹೆಸರಿನ ಗೇಮ್ ಆಡುವುದಕ್ಕಾಗಿ ಅವರು ಅನೇಕರಿಂದ ಸಾಲ ಪಡೆದಿದ್ದಾಗಿ ಅವರು ಸಾವಿಗೂ ಮೊದಲು ಬರೆದ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದರೂ ಒಂದು ತಿಂಗಳ ನಂತರ ಬಾಲಕಿ ಸಾವು

ಎಲ್ಲದಕ್ಕೂ ಸಾವು ಪರಿಹಾರವಲ್ಲ, ಆದರೆ ಇಂತಹ ಆನ್‌ಲೈನ್ ಗೇಮ್‌ನಲ್ಲಿ ಸುಲಭವಾಗಿ ಹಣ ಮಾಡುವ ಹುಚ್ಚಿಗೆ ಬಿದ್ದು, ಯುವ ತರುಣರು ತಮ್ಮ ಪ್ರಾಣವನ್ನೇ ಬಲಿ ಕೊಡುತ್ತಿರುವುದು ಆಘಾತಕಾರಿಯಾಗಿದ್ದು, ಈ ಆನ್‌ಲೈನ್ ಗೇಮ್‌ಗಳ ಬಗ್ಗೆ ಯುವ ಸಮೂಹ ಜಾಗೃತರಾಗಬೇಕಿದೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India News Live: online betting app tragedy - ಆನ್ಲೈನ್ ಬೆಟ್ಟಿಂಗ್‌ನಲ್ಲಿ ಒಂದು ಲಕ್ಷ ಕಳೆದುಕೊಂಡ ವಿದ್ಯಾರ್ಥಿ ಸಾವಿಗೆ ಶರಣು
ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ