
ರಾಂಚಿ(ಮೇ.23): ಕೊರೋನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಿಗೆ ನಿಯಂತ್ರಣ ಹೇರಿದ್ದರೂ ಅನೇಕ ಮಂದಿ ನೆಂಟರಿಷ್ಟರನ್ನು ಸೇರಿಸಿ ಆಡಂಬರದ ಮದುವೆ ಆಗುತ್ತಿದ್ದಾರೆ. ಆದರೆ, ಜಾರ್ಖಂಡ್ ಶಾಸಕರೊಬ್ಬರು ಸರ್ಕಾರದ ನಿಯಮದಂತೆ ಕೇವಲ 11 ಮಂದಿಯ ಸಮ್ಮುಖದಲ್ಲಿ ಮದುವೆ ಆಗುವ ಮೂಲಕ ಇತರರಿಗೆ ಮಾದರಿ ಆಗಿದ್ದಾರೆ.
WHO ಲಿಸ್ಟ್‌ನಲ್ಲಿಲ್ಲ ಕೊವ್ಯಾಕ್ಸೀನ್: ಭಾರತೀಯರ ವಿದೇಶ ಪ್ರಯಾಣಕ್ಕೆ ಕುತ್ತು
ರಾಂಚಿಯಲ್ಲಿ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಮನ್ ಬಿಕ್ಸಲ್ ಕೊಂಗಾರಿ ಅವರ ಮದುವೆಗೆ ಬಂದಿದ್ದು ಕೇವಲ 11 ಮಂದಿ ಮಾತ್ರ. ಹೆಣ್ಣಿನ ಕಡೆಯ ಸಂಬಂಧಿಕರು 6 ಮಂದಿ ಹಾಗೂ ಗಂಡಿನ ಕಡೆಯವರಿಂದ 5 ಮಂದಿ ಮದುವೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಕೊಂಗಾರಿ ಅವರು ವಧುವಿನ ಊರಾದ ದಿಬ್ಡಿಹ್‌ನಿಂದ 100 ಕಿ.ಮೀ.ದೂರದ ರಾಂಚಿಗೆ ತಾವೇ ಸ್ವತಃ ಕಾರು ಚಲಾಯಿಸಿಕೊಂಡು ಬಂದು ಹಸೆಮಣೆ ಏರಿದ್ದಾರೆ.
ಕೊರೋನಾ ಅಬ್ಬರ ಮಧ್ಯೆ ಲಸಿಕೆ ಪಡೆದವರಿಗೊಂದು ಶುಭ ಸಮಾಚಾರ!
ಜಾರ್ಖಂಡ್ನಲ್ಲಿ ಮೇ 27ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಮದುವೆಗೆ ಕೇವಲ 11 ಮಂದಿ ಮಾತ್ರ ಭಾಗವಹಿಸುವುದಕ್ಕೆ ಅವಕಾಶ ನೀಡಲಾಗಿದೆ. ಆದರೆ, ಬಹುತೇಕ ಕಡೆಗಳಲ್ಲಿ ಈ ನಿಯಮ ಪಾಲನೆ ಆಗುತ್ತಿಲ್ಲ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ