
ಕೋಲ್ಕತಾ(ಮಾ.27): ಮೊದಲ ಹಂತದ ಮತದಾನದ ಮುನ್ನಾದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೈಯಕ್ತಿಕ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಪಕ್ಷದ ರಾರಯಲಿ ಉದ್ದೇಶಿಸಿ ಮಾತನಾಡಿದ ಮಮತಾ, ದೇಶಾದ್ಯಂತ ಕೈಗಾರಿಕೆಗಳ ಅಭಿವೃದ್ಧಿ ನಿಷ್ಕಿ್ರಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗಡ್ಡ ಮಾತ್ರ ಬೆಳೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಮತ್ತೊಂದೆಡೆ ‘ದೇಶದ ಗೃಹ ಸಚಿವ ಅಮಿತ್ ಶಾ ಅವರನ್ನು ರಾಕ್ಷಸ’ ಎಂದು ಕಿಡಿಕಾರಿದ್ದಾರೆ.
ಕೆಲವೊಮ್ಮೆ ಮೋದಿ ಅವರು ತಮ್ಮನ್ನು ಸ್ವಾಮಿ ವಿವೇಕಾನಂದ ಅವರಿಗೆ ಹೋಲಿಸಿಕೊಳ್ಳುತ್ತಾರೆ. ಆದರೆ ಅಂಥವರು ಕ್ರೀಡಾಂಗಣಗಳಿಗೆ ತಮ್ಮ ಹೆಸರನ್ನು ನಾಮಕರಣ ಮಾಡುತ್ತಾರೆ. ಅವರ ಮೆದುಳಿನಲ್ಲಿ ಏನೋ ಸಮಸ್ಯೆ ಇದ್ದು, ಅವರಿಗೆ ಹುಚ್ಚು ಹಿಡಿದಂತೆ ಭಾಸವಾಗುತ್ತಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ