ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದ ಶಶಿಕಲಾಗೆ ಆಫರ್!

Published : Mar 25, 2021, 02:57 PM ISTUpdated : Mar 25, 2021, 03:31 PM IST
ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದ ಶಶಿಕಲಾಗೆ ಆಫರ್!

ಸಾರಾಂಶ

 ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಜೈಲು ಶಿಕ್ಷೆ ಮುಗಿಸಿ ಮರಳಿರುವ ವಿ.ಕೆ. ಶಶಿಕಲಾ| ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದ ಶಶಿಕಲಾಗೆ ಆಫರ್!

ಹೈದರಾಬಾದ್(ಮಾ.25):  ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಜೈಲು ಶಿಕ್ಷೆ ಮುಗಿಸಿ ಮರಳಿರುವ ವಿ.ಕೆ. ಶಶಿಕಲಾ ಅವರು ಅಣ್ಣಾಡಿಎಂಕೆಗೆ ಮರಳಲು ಬಯಸಿದರೆ ಅದನ್ನು ಪರಿಶೀಲಿಸಲು ಮುಕ್ತವಾಗಿರುವುದಾಗಿ ತಮಿಳುನಾಡು ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಹೇಳಿದ್ದಾರೆ.

‘ಶಶಿಕಲಾ ಅವರು 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. 32 ವರ್ಷಗಳ ಕಾಲ ಅವರು ಅಮ್ಮಾ (ಜಯಲಲಿತಾ) ಜತೆಗಿದ್ದರು. ಅವರ ಸೇವೆ ಮಾಡಿದ್ದರು. ಪಕ್ಷದ ಈಗಿನ ವ್ಯವಸ್ಥೆಯನ್ನು ಒಪ್ಪಿಕೊಂಡರೆ, ಅವರ ವಾಪಸಾತಿಯನ್ನು ಮಾನವೀಯ ನೆಲೆಯಲ್ಲಿ ಪರಿಶೀಲಿಸುತ್ತೇವೆ’ ಎಂದು ಟೀವಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಶಶಿಕಲಾ ನಾಯಕತ್ವ ವಿರೋಧಿಸಿ 2017ರ ಫೆಬ್ರವರಿಯಲ್ಲಿ ಪನ್ನೀರ್‌ಸೆಲ್ವಂ ಅವರು ಜಯಲಲಿತಾ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದ್ದರು. ಇದೀಗ ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!