
ನವದೆಹಲಿ(ಜೂ.08): ಕೊರೋನಾ ಕಾರಣದಿಂದಾಗಿ ದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ(ಎನ್‌ಸಿಪಿಸಿಆರ್) ಮಾಹಿತಿ ನೀಡಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ, ‘2020ರ ಏಪ್ರಿಲ್ 1ರಿಂದ 2021ರ ಜೂ.5ರವರೆಗೆ ಕೊರೋನಾ ಹಾಗೂ ಇನ್ನಿತರ ಕಾರಣಗಳಿಂದ ತಂದೆ ಅಥವಾ ತಾಯಿ, ಪೋಷಕರು ಹಾಗೂ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳ ಕುರಿತಾದ ಮಾಹಿತಿಯನ್ನು ಸಂಗ್ರಹಿಸಿ ಬಾಲ ಸ್ವರಾಜ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿವೆ. ಈ ವರದಿಯ ಪ್ರಕಾರ 26,176 ಮಕ್ಕಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದಾರೆ.
3,621 ಮಕ್ಕಳು ಪೋಷಕರನ್ನು ಕೆಳೆದುಕೊಂಡು ಅನಾಥರಾಗಿದ್ದಾರೆ. 274 ಮಕ್ಕಳು ಕುಟುಂಬದಿಂದ ದೂರವಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಕೊರೋನಾದಿಂದಾಗಿ 7084 ಮಕ್ಕಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದು, 217 ಮಂದಿ ಅನಾಥರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ