ಸರ್ಕಾರಿ ದತ್ತು ಏಜೆನ್ಸಿಗಳಲ್ಲಿ 800ಕ್ಕೂ ಹೆಚ್ಚು ಮಕ್ಕಳ ಸಾವು!

Published : Jul 12, 2022, 07:12 AM IST
ಸರ್ಕಾರಿ ದತ್ತು ಏಜೆನ್ಸಿಗಳಲ್ಲಿ 800ಕ್ಕೂ ಹೆಚ್ಚು ಮಕ್ಕಳ ಸಾವು!

ಸಾರಾಂಶ

* ಪಾಲಕರಿಂದ ಅಸುರಕ್ಷಿತ ಸ್ಥಳಗಳಲ್ಲಿ ತ್ಯಜಿಸುವಿಕೆ ಕಾರಣ * ಸರ್ಕಾರಿ ದತ್ತು ಏಜೆನ್ಸಿಗಳಲ್ಲಿ 800ಕ್ಕೂ ಹೆಚ್ಚು ಮಕ್ಕಳ ಸಾವು! * ಮೃತರಲ್ಲಿ 2 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಹೆಚ್ಚು

ನವದೆಹಲಿ(ಜು. 12): 2018ರಿಂದ ಸರ್ಕಾರಿ ಸ್ವಾಮ್ಯದ ವಿಶೇಷ ದತ್ತು ಏಜೆನ್ಸಿಗಳಲ್ಲಿ 800ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವ ಕಳವಳಕಾರಿ ಸಂಗತಿ ಬೆಳಕಿಗೆ ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನ ಮಕ್ಕಳು 2 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ ಆರ್‌ಟಿಐಗೆ ನೀಡಿದ ಪ್ರತಿಕ್ರಿಯೆಗಳ ಪ್ರಕಾರ 2021-22 ರಲ್ಲಿ ಸರ್ಕಾರಿ ಸ್ವಾಮ್ಯದ ದತ್ತು ಏಜೆನ್ಸಿಗಳಲ್ಲಿರುವ 118 ಮಕ್ಕಳು ಮೃತಪಟ್ಟಿದ್ದು, ಅವರಲ್ಲಿ 104 ಮಕ್ಕಳು 2 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವರಾಗಿದ್ದಾರೆ. 2022-21ರಲ್ಲಿ 169 ಹಾಗೂ 2019-20ರಲ್ಲಿ 281 ಹಾಗೂ 2018-9ರಲ್ಲಿ 251 ಮಕ್ಕಳು ಮೃತಪಟ್ಟಿದ್ದಾರೆ.

ಈವರೆಗೆ ಮೃತಪಟ್ಟಒಟ್ಟು 819 ಮಕ್ಕಳಲ್ಲಿ 481 ಹೆಣ್ಣುಮಕ್ಕಳು ಹಾಗೂ 129 ಅಂಗವಿಕಲ ಮಕ್ಕಳು ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಕರು ಮಕ್ಕಳನ್ನು ಅಸುರಕ್ಷಿತ ಸ್ಥಳಗಳಲ್ಲಿ ತ್ಯಜಿಸುವುದು ಮಕ್ಕಳ ಸಾವಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಬಹಳಷ್ಟುಶಿಶುಗಳು ನಾಯಿ ಕಡಿತಕ್ಕೆ ತುತ್ತಾಗಿದ್ದು, ದತ್ತು ಏಜೆನ್ಸಿಯವರು ಮಕ್ಕಳನ್ನು ಹುಡುಕಿ ಚಿಕಿತ್ಸೆ ನೀಡಲು ಮುಂದಾದರೂ ಅವು ಬದುಕುಳಿಯಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ದೇಶದಲ್ಲಿ 7000ಕ್ಕೂ ಹೆಚ್ಚು ಮಕ್ಕಳು ವಿಶೇಷ ದತ್ತು ಏಜೆನ್ಸಿಗಳಲ್ಲಿ ವಾಸಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌