
ನವದೆಹಲಿ(ಏ.07): ಆಕ್ಸ್‌ಫರ್ಡ್ ವಿವಿ ಮತ್ತು ಆಸ್ಟ್ರಜೆನೆಕಾ ಅಭಿವೃದ್ಧಿಪಡಿಸಿರುವ ಕೊರೋನಾ ಲಸಿಕೆಯ 2 ಡೋಸ್‌ಗಳ ನಡುವಿನ ಅಂತರ 2-3 ತಿಂಗಳಷ್ಟಿದ್ದರೆ, ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿರುತ್ತದೆ.
ಇದು ವಿವಿಧ ದೇಶಗಳಲ್ಲಿ ಕೈಗೊಂಡ ಅಧ್ಯಯನದಿಂದ ಸಾಬೀತಾಗಿದೆ ಎಂದು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ಅದೇ ಲಸಿಕೆ ಅಭಿವೃದ್ಧಿಪಡಿಸಿರುವ ಸೀರಂ ಇನ್‌ಸ್ಟಿಟ್ಯೂಟ್ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ, 2 ಡೋಸ್ ನಡುವಿನ ಅಂತರ 1 ತಿಂಗಳಾಗಿದ್ದರೆ ಲಸಿಕೆ ಶೇ.70ರಷ್ಟುಪರಿಣಾಮಕಾರಿಯಾಗಿರುತ್ತದೆ. ಅದೇ ಅಂತರ 2-3 ತಿಂಗಳಿಗೆ ವಿಸ್ತರಣೆಯಾದರೆ ಲಸಿಕೆಯು ಶೇ.90ರಷ್ಟುಪರಿಣಾಮಕಾರಿಯಾಗಿರುತ್ತದೆ.
ಇದು ಕೊರೋನಾ ಲಸಿಕೆ ವಿಯಷದಲ್ಲಿ ಮಾತ್ರವಲ್ಲ, ಇತರೆ ಲಸಿಕೆಗಳ ವಿಷಯದಲ್ಲೂ ಇದೇ ರೀತಿಯಲ್ಲಿ ಲಸಿಕೆ ಸಾಮರ್ಥ್ಯದಲ್ಲಿ ಬದಲಾವಣೆ ಕಾಣಬಹುದು ಎಂದು ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ