
ನವದೆಹಲಿ(ಸೆ.16):: ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಮ್ಲಜನಕ ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಜೊತೆಗೆ ಬೇಡಿಕೆ ಹೆಚ್ಚಿದ್ದರಿಂದ ಆಮ್ಲಜನಕ ಸಿಲಿಂಡರ್‌ಗಳ ದರ ಗಗನಕ್ಕೆ ಏರಿದೆ.
ಕರ್ನಾಟಕದಲ್ಲಿ ಆಮ್ಲಜನಕ ಸಿಲಿಂಡರ್‌ಗಳ ದರ ಉತ್ಪಾದನಾ ಕಂಪನಿಗಳಿಗೆ ನೀಡಲಾದ ಗುತ್ತಿಗೆಯ ಮೇಲೆ ಅವಲಂಬಿತವಾಗಿದೆ. ಉತ್ಪಾದನಾ ಕಂಪನಿಗಳು ಮತ್ತು ಆಸ್ಪತ್ರೆಗಳ ಜೊತೆ ಮಾಡಿಕೊಳ್ಳಲಾದ ಹಳೆಯ ಗುತ್ತಿಗೆಯ ಪ್ರಕಾರ, ಪ್ರತಿ ಕ್ಯುಬಿಕ್ ಮೀಟರ್‌ಗೆ 13ರಿಂದ 18 ರು. ದರ ನಿಗದಿಪಡಿಸಲಾಗಿದೆ. ಆದರೆ, ಈಗ ಅವುಗಳ ದರ ಪ್ರತಿ ಕ್ಯುಬಿಕ್ ಮಿಟರ್‌ಗೆ 40 ರು.ವರೆಗೂ ಹೆಚ್ಚಳಗೊಂಡಿದೆ. ಕೋವಿಡ್ ಪೂರ್ವದಲ್ಲಿ ಕರ್ನಾಟಕದಲ್ಲಿ 100ರಿಂದ 150 ಮೆಟ್ರಿಕ್ ಟನ್‌ನಷ್ಟುಇದ್ದ ಆಮ್ಲಜನ ಸಿಲಿಂಡರ್‌ನ ಬೇಡಿಕೆ ಈಗ 500 ಮೆಟ್ರಿಕ್ ಟನ್‌ಗಳಿಗೆ ಏರಿಕೆ ಆಗಿದೆ ಎಂದು ವರದಿಗಳು ತಿಳಿಸಿವೆ.
ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಆದೇಶವೊಂದನ್ನು ಹೊರಡಿಸಿದ್ದ ಮಹಾರಾಷ್ಟ್ರ ಸರ್ಕಾರ, ಆಮ್ಲಜನಕ ಸಿಲಿಂಡರ್‌ಗಳನ್ನು ಹೊರ ರಾಜ್ಯಗಳಿಗೆ ಪೂರೈಸುವುದಕ್ಕೆ ನಿಷೇಧ ಹೇರಿದ್ದೇ ಈ ಸಮಸ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ