
ನವದೆಹಲಿ : ಗಣರಾಜ್ಯೋತ್ಸವದ ಮುನ್ನಾದಿನದಂದು, ಸರ್ಕಾರವು 2026ರ 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಕೇರಳದ ಮಾಜಿ ಸಿಎಂ ಮತ್ತು ಹಿರಿಯ ಕಮ್ಯುನಿಸ್ಟ್ ನಾಯಕ ವಿ.ಎಸ್. ಅಚ್ಯುತಾನಂದನ್ ಮತ್ತು ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು ನೀಡಲಾಗಿದೆ.
ಒಟ್ಟು 131 ಪದ್ಮಗಳಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಸೇರಿವೆ. ಇದರಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ಒಂದಾಗಿ ಪರಿಗಣಿಸಲಾದ 2 ಪ್ರಸಂಗಳಿವೆ.
ರಾಜೀವ್ ಗಾಂಧಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಕೆ.ಟಿ. ಥಾಮಸ್, ಕಲೆಯಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಾರ ಮತ್ತು ಪಿಟೀಲು ವಾದಕ ಎನ್. ರಾಜಮ್, ಸಾಹಿತ್ಯ ಮತ್ತು ಶಿಕ್ಷಣದಲ್ಲಿ ಖ್ಯಾತ ಮಲಯಾಳಂ ಪತ್ರಕರ್ತ ಪಿ. ನಾರಾಯಣನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಭಗತ್ ಸಿಂಗ್ ಕೋಶ್ಯಾರಿ, ನಟ ಮಮ್ಮುಟ್ಟಿ ಮತ್ತು ಬ್ಯಾಂಕರ್ ಉದಯ್ ಕೋಟಕ್ ಅವರು ಪದ್ಮಭೂಷಣ ಪ್ರಶಸ್ತಿ ವಿಜೇತರಲ್ಲಿ ಸೇರಿದ್ದಾರೆ.ಜಾಹೀರಾತು ಗುರು ಪೀಯೂಷ್ ಪಾಂಡೆ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಮತ್ತು ಬಿಜೆಪಿ ನಾಯಕ ವಿ.ಕೆ. ಮಲ್ಹೋತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದ್ದು, ಹಾಸ್ಯನಟ ಸತೀಶ್ ಶಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಜೆಎನ್‌ಯು ಮಾಜಿ ವಿಸಿ ಎಂ. ಜಗದೀಶ್ ಕುಮಾರ್, ಪ್ರಸಾರ ಭಾರತಿ ಮಾಜಿ ಸಿಇಒ ಶಶಿ ಶೇಖರ್ ವೆಂಪಾಟಿ ಮತ್ತು ನಟರಾದ ಆರ್. ಮಾಧವನ್ ಮತ್ತು ಪ್ರೊಸೇನ್‌ಜಿತ್ ಚಟರ್ಜಿ ಸಹ ಪದ್ಮಶ್ರೀ ಪ್ರಶಸ್ತಿ ಪಡೆದವರಲ್ಲಿ ಸೇರಿದ್ದಾರೆ.
ಕ್ರೀಡಾ ಕೆಟಗರಿಯಲ್ಲಿ ಟೆನಿಸ್ ದಂತಕಥೆ ವಿಜಯ್ ಅಮೃತರಾಜ್ ಅವರಿಗೆ ಪದ್ಮಭೂಷಣ. ಕ್ರಿಕೆಟಿಗ ರೋಹಿತ್ ಶರ್ಮಾ, ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಹಾಕಿ ಆಟಗಾರ್ತಿ ಸವಿತಾ ಪುನಿಯಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.--
ಪ್ರಶಸ್ತಿ ಪುರಸ್ಕೃತರಲ್ಲಿ ಮಹಿಳೆಯರಿಗೆ ಸಿಂಹಪಾಲು ಹೋಗಿದೆ. ಒಟ್ಟು 90 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ. ವಿದೇಶಿಗರ ವರ್ಗದಲ್ಲಿ 6 ಅನಿವಾಸಿ ಭಾರತೀಯರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ