
ಶ್ರೀನಗರ(ಏ.28) : ಬೈಸರನ್‌ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಒಂದು ಸಣ್ಣ ಅಸ್ಪಷ್ಟ ವಿಡಿಯೋವೊಂದು ಸೆರೆಸಿಕ್ಕಿದ್ದು ಬಿಟ್ಟಿರೆ ಇದುವರೆಗೂ ಘಟನೆಯ ಕುರಿತು ಸ್ಪಷ್ಟ ಫೋಟೋ ಅಥವಾ ವಿಡಿಯೋ ಎಲ್ಲೂ ಕಂಡುಬಂದಿರಲಿಲ್ಲ. ಆದರೆ ಸ್ಥಳೀಯ ಫೋಟೋಗ್ರಾಫರ್ ಒಬ್ಬ ಇಡೀ ಘಟನೆಯನ್ನು ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.
ಘಟನೆ ನಡೆದಾಗ ಸ್ಥಳೀಯರ ಫೋಟೋ ಮತ್ತು ವಿಡಿಯೋಗಳನ್ನು ಈ ಫೋಟೋಗ್ರಾಫರ್ ಸೆರೆಹಿಡಿಯುತ್ತಿದ್ದ. ಈ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಗಾಬರಿಗೊಂಡ ಆತ ಓಡಿ ಹೋಗಿ ಸಮೀಪದ ಮರವೊಂದನ್ನು ಹತ್ತಿ ಉಗ್ರರಿಗೆ ಕಾಣದಂತೆ ಕುಳಿತಿದ್ದಾನೆ. ಅಲ್ಲಿಂದಲೇ ದಾಳಿಯ ಎಲ್ಲಾ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಈ ವಿಡಿಯೋ ಇಡೀ ಪ್ರಕರಣದ ಮೇಲೆ ಬೆಳಕು ಚೆಲ್ಲಿದೆ ಮತ್ತು ಉಗ್ರರ ಪತ್ತೆಗೆ ತನಿಖಾ ಸಂಸ್ಥೆಗಳಿಗೆ ಅತ್ಯಂತ ನಿಖರ ಸಾಕ್ಷ್ಯವಾಗಿ ಹೊರಹೊಮ್ಮಿದೆ ಎಂದು ಮೂಲಗಳು ತಿಳಿಸಿವೆ. ಇದು, ಉಗ್ರದಾಳಿಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ)ದ ಪಾಲಿಗೆ ಪ್ರಮುಖ ಸಾಕ್ಷಿಯಾಗಿದೆ. ವೀಡಿಯೋಗ್ರಾಫರ್‌ನನ್ನು ತನಿಖೆಗೆ ಒಳಪಡಿಸಿದ ಎನ್‌ಐಎ ತಂಡ, ಉಗ್ರರನ್ನು ಗುರುತಿಸಲು ವೀಡಿಯೋವನ್ನು ಪರಿಶೀಲಿಸುತ್ತಿದೆ. ತನಿಖೆ ನಡೆಯುತ್ತಿರುವ ಕಾರಣದಿಂದ ಈ ವಿಡಿಯೋನ್ನು ಬಹಿರಂಗಪಡಿಸಿಲ್ಲ.
Entertainment News Live: ಪೆಹಲ್ಗಾಮ್ ದಾಳಿಯಿಂದ ಬಾಲಿವುಡ್‌ಗೆ ಮತ್ತೊಂದು ಹೊಡೆತ
ಪಹಲ್ಗಾಂ ದಾಳಿ ತನಿಖೆ ಎನ್‌ಐಎ ತೆಕ್ಕೆಗೆ
26 ಮಂದಿಯನ್ನು ಬಲಿಪಡೆದ ಪಹಲ್ಗಾಂ ಉಗ್ರ ದಾಳಿಯ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನ್ನ ತೆಕ್ಕೆಗೆ ತೆಗದುಕೊಂಡಿದೆ.ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಎನ್‌ಐಎ, ‘ಈಗಾಗಲೇ ನಾವು ತನಿಖೆಯನ್ನು ಆರಂಭಿಸಿದ್ದೇವೆ. ಕಳೆದ ಮಂಗಳವಾರ ಬೈಸರನ್‌ನಲ್ಲಿ ಘಟನೆ ನಡೆದ ಹೊತ್ತಿನಲ್ಲಿದ್ದ ಅಲ್ಲಿ ಇದ್ದ ವ್ಯಕ್ತಿಗಳಿಂದ ಸಣ್ಣಸಣ್ಣ ಮಾಹಿತಿಯನ್ನು ಕಲೆ ಹಾಕುವ ಯತ್ನ ಮಾಡುತ್ತಿದ್ದೇವೆ. ಈ ಮೂಲಕ ದಾಳಿಕೋರರ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದೆ.
‘ದಾಳಿಯ ಪ್ರತ್ಯಕ್ಷದರ್ಶಿಗಳನ್ನು ಪೊಲೀಸ್ ಮಹಾನಿರ್ದೇಶಕ (ಐಜಿಪಿ), ಉಪಪೊಲೀಸ್ ಮಹಾನಿರ್ದೇಶಕ (ಡಿಐಜಿಪಿ) ಮತ್ತು ಭಯೋತ್ಪಾದನಾ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಯ ಮೇಲ್ವಿಚಾರಣೆಯಲ್ಲಿ ಎನ್‌ಐಎ ತಂಡಗಳು ವಿಚಾರಿಸುತ್ತಿವೆ. ವಿಧಿವಿಜ್ಞಾನ ಮತ್ತು ಇತರ ತಜ್ಞರ ನೆರವಿನೊಂದಿಗೆ ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಉಗ್ರರ ಪತ್ತೆಗಾಗಿ ಸಾಕ್ಷ್ಯಗಳ ಹುಡುಕಾಟವನ್ನು ತೀವ್ರಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.
ಪಾಕ್‌ನಿಂದ 22 ಗಂಟೆ ನಡೆದು ಬಂದಿದ್ದ ಉಗ್ರರು
ಏ.22ರಂದು ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸುವ ಮುನ್ನ ಸತತ 22 ತಾಸುಗಳ ಕಾಲ ನಡೆದುಕೊಂಡು ಬಂದಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ದಾಳಿಗೂ ಮುನ್ನ ಉಗ್ರರು ಕೋಕರ್‌ನಾಗ್‌ನಿಂದ 20-22 ತಾಸುಗಳ ಕಾಲ ಕೋಕರ್‌ನಾಗ್‌ನಿಂದ ದಟ್ಟ ಅರಣ್ಯದ ಮೂಲಕ ಬಂದಿದ್ದರು. ನಾಲ್ವರು ಈ ಮಾರ್ಗವಾಗಿ ಬಂದಿದ್ದು, ಅದರಲ್ಲಿ ಮೂರ್ವರು ಪಾಕಿಸ್ತಾನಿಯರು ಮತ್ತು ಓರ್ವ ಸ್ಥಳೀಯ ಉಗ್ರನಿದ್ದ ಎನ್ನಲಾಗಿದೆ. ದಾಳಿ ಮಾಡಿದ ಬಳಿಕ ಓರ್ವ ಸ್ಥಳೀಯ ಮತ್ತು ಓರ್ವ ಪ್ರವಾಸಿಗನ ಫೋನ್‌ಗಳನ್ನು ಉಗ್ರರು ವಶಪಡಿಸಿಕೊಂಡಿದ್ದರು. ವಿಧಿವಿಜ್ಞಾನ ಪರೀಕ್ಷೆ ವೇಳೆ ದಾಳಿಯಲ್ಲಿ ಉಗ್ರರು ಎಕೆ 47 ಮತ್ತು ಎಂ4 ರೈಫಲ್‌ಗಳನ್ನು ಬಳಸಿರುವುದು ಖಾತ್ರಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನಿಗಳು ಭೇಟಿ ನೀಡುವ ಭಾರತದ 5 ಪ್ರಮುಖ ಧಾರ್ಮಿಕ ಕ್ಷೇತ್ರಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ