ಪ್ರವಾಸಿಗರ ನರಮೇಧ: AK 47 ಗನ್ ಹಿಡಿದ ಉಗ್ರನ ಮೊದಲ ಫೋಟೋ ಬಹಿರಂಗ

Published : Apr 23, 2025, 09:39 AM ISTUpdated : Apr 23, 2025, 10:29 AM IST
ಪ್ರವಾಸಿಗರ ನರಮೇಧ: AK 47 ಗನ್ ಹಿಡಿದ ಉಗ್ರನ ಮೊದಲ ಫೋಟೋ ಬಹಿರಂಗ

ಸಾರಾಂಶ

Pahalgam Terror Attack Live Update: ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರೊಬ್ಬರು ತಮ್ಮ ಮೊಬೈಲ್‌ನಲ್ಲಿ AK 47 ಗನ್ ಹಿಡಿದ ಉಗ್ರನ ಫೋಟೋವನ್ನು ಸೆರೆಹಿಡಿದಿದ್ದಾರೆ.

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಗಾಂನ ಬಳಿಯ ಬೈಸರಣ್‌ ಎಂಬಲ್ಲಿ ಐವರು ಉಗ್ರರು ದಾಳಿ ನಡೆಸಿದ್ದರು. ದಾಳಿ ನಡೆಸಿದ ಐವರ ಪೈಕಿ ಓರ್ವ ಉಗ್ರನ ಫೋಟೋ ಹೊರಬಂದಿದೆ. ಪ್ರವಾಸಿಗರೊಬ್ಬರು AK 47 ಗನ್ ಹಿಡಿದ ಉಗ್ರನ ಫೋಟೋವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸದ್ಯ ಬೆಳಕಿಗೆ ಬಂದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದ ದಾಳಿಯಲ್ಲಿ 26 ಪ್ರವಾಸಿಗರು ಮೃತರಾಗಿದ್ದಾರೆ.ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ಮುಂದಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿರುವ ಪ್ರವಾಸಿಗರ ಸ್ಥಳಾಂತರಕ್ಕೆ ಹೆಚ್ಚುವರಿ ವಿಮಾನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 

ಏನಾಯ್ತು?
ಕಾಶ್ಮೀರಕ್ಕೆ ತೆರಳಿದ್ದ ಕನ್ನಡಿಗರು ಸೇರಿ ಪ್ರವಾಸಿಗರ ಮೇಲೆ 5 ಉಗ್ರರಿಂದ ಏಕಾಏಕಿ ಭೀಕರ ಗುಂಡಿನ ದಾಳಿ. 26 ಜನರ ಸಾವು

ಎಲ್ಲಿ?
ಪಹಲ್ಗಾಮ್‌ ಜಿಲ್ಲೆಯ ಬೈಸರಣ್ ಎಂಬ ಪ್ರವಾಸಿ ತಾಣದಲ್ಲಿ ಘಟನೆ. ಲಷ್ಕರ್‌ ಎ ತೊಯ್ಬಾ ನಂಟಿನ ಉಗ್ರ ಸಂಘಟನೆಯಿಂದ ಕೃತ್ಯ

ಯಾವಾಗ?
ಮಂಗಳವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ದಾಳಿ. ಉಗ್ರರ ಪತ್ತೆಗೆ ಭಾರೀ ಕಾರ್ಯಾಚರಣೆ

ಇದನ್ನೂ ಓದಿ: ಮದುವೆಯಾದ ಆರೇ ದಿನಕ್ಕೆ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌!

ಪಹಲ್ಗಾಂ ಎಂಬ ‘ಮಿನಿ ಸ್ವಿಜರ್ಲೆಂಡ್‌’
ದಕ್ಷಿಣ ಕಾಶ್ಮೀರದ ದಕ್ಷಿಣದಲ್ಲಿರುವ ಅನಂತನಾಗ್‌ ಜಿಲ್ಲೆಯ ಪಹಲ್ಗಾಂ, ‘ಮಿನಿ ಸ್ವಿಜರ್‌ಲೆಂಡ್‌’ ಎಂದೇ ಹೆಸರುವಾಸಿ. ಇದಕ್ಕೆ ಕಾರಣ, ಕಣ್ಣು ಹಾಯಿಸಿದಷ್ಟು ದೂರ ಕಾಣುವ ಹಸಿರು ಹಾಸು, ಹಿಮಾಚ್ಛಾದಿತ ಪರ್ವತಗಳು, ಅವುಗಳ ನಡುವೆ ಬಳುಕುತ್ತಾ ಹರಿಯುವ ಲಿಡ್ಡರ್‌ ನದಿ ಹಾಗೂ ಹಂಗುಲ್, ಕಸ್ತೂರಿ ಜಿಂಕೆ ಇತ್ಯಾದಿಗಳನ್ನೊಳಗೊಂಡ ವೈವಿಧ್ಯಮಯ ಪ್ರಾಣಿಸಂಕುಲ. ಅತಿಹೆಚ್ಚು ಪ್ರವಾಸಿಗರನ್ನು, ಅದರಲ್ಲೂ ನವವಿವಾಹಿತ ಜೋಡಿಗಳನ್ನು ಸೆಳೆಯುವ ರಾಜ್ಯದ ಪ್ರವಾಸಿ ತಾಣಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವ ಪಹಲ್ಗಾಂ, ತನ್ನ ಪ್ರಶಾಂತತೆಗೂ ಹೆಸರುವಾಸಿಯಾಗಿದೆ.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಏರ್‌ಪೋರ್ಟಿಗೇ ತೆರಳಿ ಪುಟಿನ್‌ಗೆ ಪ್ರಧಾನಿ ಮೋದಿ ಅಚ್ಚರಿ ಸ್ವಾಗತ
2ನೇ ದಿನವೂ ಇಂಡಿಗೋ ಟ್ರಬಲ್ : 550 ವಿಮಾನಗಳ ಸಂಚಾರ ರದ್ದು