
ಜೈಪುರ(ಅ.25): ರಾಜಸ್ಥಾನದ ಬಾರ್ಮೇರ್‌ನಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ ಪರ ಗೂಢಚಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶನಿವಾರ ಬಂಧಿಸಲಾಗಿದೆ.
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ, ಪಾಕ್ ಗುಪ್ತಚರನಾಗಿ ಕಾರ್ಯನಿರ್ವಹಿಸುತ್ತ ಯುದ್ಧವಿಮಾನಗಳ ರಹಸ್ಯ ಮಾಹಿತಿ ಹಸ್ತಾಂತರಿಸುತ್ತಿದ್ದ ಎಚ್‌ಎಎಲ್ ಉದ್ಯೋಗಿ ದೀಪಕ್ ಶಿರಸಾಟ್ ಎಂಬಾತನನ್ನು ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಇದೇ ರೀತಿಯ ಬಂಧನ ಬಾರ್ಮೇರ್‌ನಲ್ಲಿ ಆಗಿದೆ.
ಬಂಧಿತ ವ್ಯಕ್ತಿಯನ್ನು ಜೈಪುರಕ್ಕೆ ಹೆಚ್ಚಿನ ವಿಚಾರಣೆಗೆ ಕರೆತರಲಾಗಿದೆ ಎಂದು ರಾಜಸ್ಥಾನ ಗುಪ್ತದಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. ಬಾರ್ಮೇರ್ ಜಿಲ್ಲೆಯು ಪಾಕಿಸ್ತಾನದ ಗಡಿಗೆ ಹೊಂದಿಕೊಂಡ ಜಿಲ್ಲೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ