'ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು' ದೇಶದ ವಿರುದ್ಧ ವಿಷ ಕಾರಿದ ಪಾಕ್ ರಕ್ಷಣಾ ಸಚಿವ!

Published : May 09, 2025, 08:31 PM ISTUpdated : May 09, 2025, 08:37 PM IST
'ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು' ದೇಶದ ವಿರುದ್ಧ ವಿಷ ಕಾರಿದ ಪಾಕ್ ರಕ್ಷಣಾ ಸಚಿವ!

ಸಾರಾಂಶ

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಉನ್ನತ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಸಂಸತ್ತಿನಲ್ಲಿ ಭಾರತ ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳು ಪಾಕಿಸ್ತಾನದ ಜೊತೆ ನಿಂತಿವೆ ಎಂದು ಹೇಳಿದರು. ಇಷ್ಟೇ ಅಲ್ಲ, ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು ಎಂದು ವಿಷ ಕಾರಿದ್ದಾರೆ.

India attack on pakistan:  ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಉನ್ನತ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಸಂಸತ್ತಿನಲ್ಲಿ ಭಾರತ ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳು ಪಾಕಿಸ್ತಾನದ ಜೊತೆ ನಿಂತಿವೆ ಎಂದು ಹೇಳಿದರು. ಇಷ್ಟೇ ಅಲ್ಲ, ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು ಎಂದು ವಿಷ ಕಾರಿದ್ದಾರೆ.

ಇಡೀ ಜಗತ್ತು ಪಾಕಿಸ್ತಾನದೊಂದಿಗಿದೆ:
ಖವಾಜಾ ಆಸಿಫ್ ಅವರು, ಪಾಕಿಸ್ತಾನವು ಗಲ್ಫ್ ರಾಷ್ಟ್ರಗಳು, ಇರಾನ್, ಚೀನಾ, ಟರ್ಕಿ ಮತ್ತು ಅಜೆರ್ಬೈಜಾನ್ ಸೇರಿದಂತೆ ಅನೇಕ ದೇಶಗಳ ಬೆಂಬಲವನ್ನು ಹೊಂದಿದೆ ಎಂದು ಹೇಳಿದ್ದಾರೆ. 'ನಾವು ಯುಎಇ, ಸೌದಿ ಅರೇಬಿಯಾ, ಕತಾರ್ ಮತ್ತು ಚೀನಾದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ವಿಶ್ವಸಂಸ್ಥೆಯಲ್ಲಿ ನಮ್ಮ ಮಿಷನ್ ಭಾರತಕ್ಕೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುತ್ತಿದೆ' ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ...

ಭಾರತದೊಂದಿಗೆ ಇಸ್ರೇಲ್ ಮಾತ್ರ
ಭಾರತಕ್ಕೆ ಕೇವಲ ಇಸ್ರೇಲ್‌ನ ಬೆಂಬಲವಿದೆ ಎಂದಿರುವ ಖವಾಜಾ ಮುಹಮ್ಮದ್ ಆಸಿಫ್, ಇಸ್ರೇಲ್ ಮತ್ತು ಭಾರತ ಇಸ್ಲಾಂನ ಶತ್ರುಗಳು. ಮುಸ್ಲಿಂ ರಾಷ್ಟ್ರಗಳ ವಿರುದ್ಧ ದ್ವೇಷದಲ್ಲಿ ಒಂದಾಗಿವೆ.ಇದಕ್ಕೆ ಪೂರಕವಾಗಿ, ಟರ್ಕಿ, ಚೀನಾ ಮತ್ತು ಅಜೆರ್ಬೈಜಾನ್ ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ಸೂಚಿಸಿವೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಕೇಂದ್ರದ ವಿರುದ್ಧ ಸುಳ್ಳು ಸುದ್ದಿ; ಕೋಲಾರದ ಮುನೀರ್ ಖಾನ್ ವಿರುದ್ಧ ಎಫ್‌ಐಆರ್

ವಾಸ್ತವವಾಗಿ ಅನೇಕ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿವೆ. ಪಾಕಿಸ್ತಾನ ಮಾತ್ರ ಇದಕ್ಕೆ ತದ್ವಿರುದ್ಧವಾಗಿ ಸುಳ್ಳುಗಳನ್ನೇ ಹರಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..